Advertisement
ಘಟನೆಯ ಸಂಬಂಧ ಮೈಸೂರು- ಬೆಂಗಳೂರು ಪೊಲೀಸರ ಜಂಟಿ ತಂಡಕ್ಕೆ ಆರೋಪಿಗಳ ಸುಳಿವು ಲಭಿಸಿದ್ದು, ನಗರದ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಕೇರಳದ ಮೂವರು ಮತ್ತು ತಮಿಳುನಾಡಿನ ಒಬ್ಬ ವಿದ್ಯಾರ್ಥಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ. ಅತ್ಯಾಚಾರ ಘಟನೆಯ ಬಳಿಕ ಇವರು ಮೈಸೂರಿನ ಮನೆ ಖಾಲಿ ಮಾಡಿ ಕೇರಳ ಮತ್ತು ತಮಿಳುನಾಡಿನಲ್ಲಿ ತಲೆಮರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Related Articles
ಘಟನೆ ನಡೆದು 3 ದಿನಗಳಾದರೂ ಸಂತ್ರಸ್ತೆ ದೂರು, ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ದುಷ್ಕರ್ಮಿಗಳು ಈಕೆಗೆ ಪರಿಚಯದವರೇ ಎಂಬ ಅನುಮಾನ ವ್ಯಕ್ತವಾಗಿದೆ. ಆಕೆ ಹೇಳಿಕೆ ದಾಖಲಿಸದೆ, ದೂರು ನೀಡದೆ ಇರುವುದರಿಂದ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಸಂತ್ರಸ್ತೆ ದೂರು ನೀಡಲು ನಿರಾಕರಿಸಿದ್ದು, ಚೇತರಿಸಿಕೊಂಡ ಬಳಿಕ ಊರಿಗೆ ತೆರಳುವ ಯೋಚನೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
3 ಲಕ್ಷ ರೂ.ಗೆ ಬೇಡಿಕೆದುಷ್ಕರ್ಮಿಗಳು ಅತ್ಯಾಚಾರ ಎಸಗಿದ ಬಳಿಕ ನನ್ನ ತಂದೆಗೆ ಕರೆ ಮಾಡಿ 3 ಲಕ್ಷ ರೂ. ಹಣ ತರಿಸುವಂತೆ ಒತ್ತಾಯಿಸಿದ್ದರು ಎಂದು ಸಂತ್ರಸ್ತೆಯ ಸ್ನೇಹಿತ ಹೇಳಿಕೆ ನೀಡಿದ್ದಾನೆ. ನಾನು ವಾಕಿಂಗ್ ನಡೆಸುವ ಸ್ಥಳದಲ್ಲಿ ಸ್ನೇಹಿತೆಯ ಜತೆ ಕುಳಿತಿದ್ದಾಗ ನಾಲ್ವರು ಏಕಾಏಕಿ ಬಂದು ಹಲ್ಲೆ ನಡೆಸಿದರು. ಸ್ನೇಹಿತೆಯನ್ನು ಎಳೆದುಕೊಂಡು ಹೋದರು. ನಾನು ಪ್ರಜ್ಞೆ ತಪ್ಪಿ ಬಿದ್ದೆ ಎಂದಿದ್ದಾನೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಘಟನ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶೀಘ್ರದಲ್ಲೇ ಆರೋಪಿಗಳ ಪತ್ತೆ ಹಚ್ಚುವುದಾಗಿ ಹೇಳಿದ್ದಾರೆ.