Advertisement
ಅ. 15ರಂದು ದಸರಾ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸುವ ಮೂಲಕ ಜನರ ಉತ್ಸವವಾಗುವಂತೆ ನೋಡಿ ಕೊಳ್ಳ ಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಜಂಬೂ ಸವಾರಿ, ದೀಪಾಲಂಕಾರ, ಪಂಜಿನಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಮಾತ್ರವಲ್ಲದೆ ಅನಂತರವೂ ಒಂದು ವಾರದವರೆಗೆ ಇರಬೇಕು. ಸ್ತಬ್ಧ ಚಿತ್ರ ಗಳ ಆಯ್ಕೆ ವೇಳೆ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟéಗಳ ಜತೆಗೆ 5 ಗ್ಯಾರಂಟಿ ಗಳನ್ನು ಬಿಂಬಿಸಿ ಜನರಿಗೆ ಸಂದೇಶ ನೀಡು ವಂತಿರಬೇಕು ಎಂದು ಸಿಎಂ ಸೂಚಿಸಿದರು.
Related Articles
ದಸರಾ ಉದ್ಘಾಟನೆಯಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಭರ್ತಿಯಾಗಿರಬೇಕು. ಎಲ್ಲ ಪ್ರಕಾರಗಳಲ್ಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು. ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ ನೀಡಬೇಕು. ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದರು.
Advertisement
ಸುತ್ತೂರು ಶ್ರೀಗಳಿಂದ ಉದ್ಘಾಟನೆ?ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀ ಕೇಂದ್ರ ಸ್ವಾಮೀಜಿ ಅವರಿಂದ ಉದ್ಘಾ ಟಿಸುವ ಸಂಬಂಧ ಸಭೆಯಲ್ಲಿ ಚರ್ಚೆಯಾಗಿದ್ದು, ಉದ್ಘಾಟಕರ ಆಯ್ಕೆ ಯನ್ನು ಮುಖ್ಯಮಂತ್ರಿ ಸಿದ್ದ ರಾಮಯ್ಯ ವಿವೇಚನೆಗೆ ಬಿಡಲಾಗಿದೆ. ಸಭೆಯಲ್ಲಿದ್ದ ಶಾಸಕ ರೊಬ್ಬರು ಸುತ್ತೂರು ಶ್ರೀಗಳ ಹೆಸರು ಪ್ರಸ್ತಾವಿಸಿದ್ದು, ಈ ಬಾರಿಯ ದಸರಾ ಉತ್ಸವಕ್ಕೆ ಅವರಿಂದಲೇ ಚಾಲನೆ ಕೊಡಿ ಸುವುದು ಉತ್ತಮ ಆಯ್ಕೆ ಯಾಗಿರ ಲಿದೆ ಎಂದು ಸಲಹೆ ನೀಡಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಏರ್ ಶೋ ಆಯೋಜನೆಗೆ ಚಿಂತನೆ
ಪ್ರಸ್ತುತ ರಾಜ್ಯ ಸರಕಾರವು ಜಾರಿಗೊಳಿಸಿರುವ ಶಕ್ತಿ ಯೋಜನೆಯಿಂದಾಗಿ ದಸರಾ ಉತ್ಸವದಲ್ಲಿ ಪಾಲ್ಗೊಳುವ ಮಹಿಳೆಯರ ಸಂಖ್ಯೆ ಹೆಚ್ಚಾಗಬಹುದು ಎಂಬ ನಿರೀಕ್ಷೆ ಇದೆ. ಜನರ ದಸರಾ ಇದಾಗಬೇಕಿರುವುರಿಂದ ಮೂಲ ಸೌಕರ್ಯ ಕೊರತೆ ಆಗದಂತೆ ನೋಡಿಕೊಳ್ಳಿ ಎಂದ ಸಿಎಂ, ಈ ಬಾರಿಯ ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳುವ ಉದ್ದೇಶವಿದ್ದು, ಈ ಕುರಿತು ರಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.