Advertisement

Mahisha Vs Chalo: ಶನಿವಾರ ಮುಂಜಾನೆಯವರೆಗೆ ಬೆಟ್ಟ ಸೇರಿ ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ

03:13 PM Oct 12, 2023 | Team Udayavani |

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಮತ್ತು ಅದಕ್ಕೆ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳು ಆಯೋಜನೆಯಾಗಿರುವ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗುರುವಾರ ಮಧ್ಯರಾತ್ರಿಯಿಂದ ಶನಿವಾರ (ಅ.14) ಬೆಳಗಿನವರೆಗೆ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

Advertisement

ಮೈಸೂರು ನಗರ ಪೊಲೀಸ್‌ ಕಮೀಷನರ್ ರಮೇಶ್‌ ಬಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಕಾನೂನು ಮತ್ತು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ (ಟೌನ್‌ಹಾಲ್‌ ಒಳ ಆವರಣ ಹೊರತುಪಡಿಸಿ) ಅ. 12 ರಿಂದ ಅ.14ರ ಬೆಳಿಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸಮಯದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ, ರ್ಯಾಲಿ, ಪರ- ವಿರೋಧ ಘೋಷಣೆ ಕೂಗುವುದು, ಪಠಾಕಿ ಸಿಡಿಸುವುದು, ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next