Advertisement

ಸರಳವಾಗಿ ನಡೆಯಲಿದೆ ಮೈಸೂರು ದಸರಾ ಮಹೋತ್ಸವ! ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರ

06:24 PM Sep 12, 2020 | sudhir |

ಮೈಸೂರು ; ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವವವು ಚಾಮುಂಡಿ ಬೆಟ್ಟ ಹಾಗೂ ಅರಮನೆಯ ಅವರಣಕ್ಕಷ್ಟೇ ಸೀಮಿತವಾಗಿ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ.

Advertisement

ಮೈಸೂರು ಅರಮನೆ ಮಂಡಳಿ ಕಚೇರಿಯಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯ ಬಳಿಕ‌ ನಡೆದ ಸುದ್ದಿಗೋಷ್ಠಿಯಲ್ಲಿ
ಮಾತನಾಡಿದ ಸಚಿವರು ಈ ಬಾರಿ ಅಕ್ಟೋಬರ್ ದಸರಾ ಮಹೋತ್ಸವವನ್ನು ಅಕ್ಟೋಬರ್ 17 ರಂದು ಬೆಳಿಗ್ಗೆ 7:45 ರಿಂದ 8:15 ರೊಳಗಿನ ಶುಭ ಮುಹೂರ್ತದಲ್ಲಿ ಕೋವಿಡ್ ವಾರಿಯರ್ಸ್ ಉದ್ಘಾಟಿಸಲಿದ್ದಾರೆ .

ಅಕ್ಟೋಬರ್ 2 ರಂದು ಮಧ್ಯಾಹ್ನ 12 ಗಂಟೆಗೆ ದಸರಾ ಗಜಪಡೆಗಳು ಮೈಸೂರು ಅರಮನೆಯ ಆವರಣಕ್ಕೆ ಆಗಮಿಸಲಿದ್ದು ಈ ಹಿಂದಿನಂತೆ ವೀರನ ಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ಇರುವುದಿಲ್ಲ ಹಾಗಾಗಿ ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆಗಳು ಆಗಮಿಸಲಿದೆ.

ಅರಮನೆಗೆ ದಸರಾ ದೀಪಾಲಂಕಾರ ಪ್ರತಿ ಬಾರಿಯಂತೆಯೇ ಇರಲಿದ್ದು ಜಂಬೂ ಸವಾರಿ ಮೆರವಣಿಗೆ ಕೇವಲ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ ಈ ಸಂದರ್ಭದಲ್ಲಿ ಇಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಎರಡು ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದರು.

ಅರ್ಜುನನಿಗೆ 60 ವರ್ಷ ಮೀರಿರುವುದರಿಂದ ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದೆ. ಸುಪ್ರಿಂ ಕೋರ್ಟ್ ಆದೇಶದ ಪ್ರಕಾರ ಅರ್ಜುನನಿಗೆ 60 ವರ್ಷ ಮೀರಿರುವುದರಿಂದ ಅಂಬಾರಿ ಹೊರುವ ಅವಕಾಶವಿಲ್ಲದ ಕಾರಣ ಈ ಬಾರಿ ಅಂಬಾರಿ ಹೊರುವ ಅವಕಾಶ ಅಭಿಮನ್ಯುವಿಗೆ ಸಂದಿದೆ,  ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ‌ ಎಂದರು.

Advertisement

ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ‌ ಆಯೋಜಿಸಲಾಗಿದ್ದು ಸಾರ್ವಜನಿಕರಿಗೆ ಅವಕಾಶ ಇಲ್ಲದ ಕಾರಣ ಎಲ್ಲಾ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರವಾಗಲಿದೆಯಂತೆ.

ದಸರಾ ಉದ್ಘಾಟನೆಯ ಬಳಿಕ ಐವರು ಕೋವಿಡ್ ವಾರಿಯರ್ಸ್ ಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next