Advertisement
ಗೊಂಬೆಗಳ ಉತ್ಸವವು ತಮ್ಮ ಪರಿಕಲ್ಪನೆ, ಆಸಕ್ತಿಗೆ ಅನುಗುಣವಾಗಿ ವಿವಿಧ ಮಾದರಿಯ ಗೊಂಬೆಗಳನ್ನು ಸಂಗ್ರಹಿಸಿ, ಅವುಗಳನ್ನು ಮನೆಯ ಸ್ಥಳಾವಕಾಶವನ್ನು ನೋಡಿಕೊಂಡು ಜೋಡಿಸಿ ಬೆಳಕು ಮತ್ತಿತರೆಗಳಿಂದ ಶೃಂಗಾರಿಸಿ ಪ್ರದರ್ಶನಕ್ಕಿಡುತ್ತಾರೆ.
Related Articles
Advertisement
ಯಾರು ಹಿಂದಿನಿಂದಲೂ ಈ ಸಂಪ್ರದಾಯವನ್ನು ಆಚರಿಸುತ್ತಾ ಬಂದಿದ್ದಾರೋ, ಅಂತಹವರ ಮನೆಯಲ್ಲಿ ಈ ಗೊಂಬೆ ಕೂಡ್ರಿಸುವುದನ್ನು ಈಗಲೂ ನೋಡಬಹುದು. ನಮ್ಮ ದೇಶದ ಪೌರಾಣಿಕ ಹಿನ್ನೆಲೆ, ಕಲೆ, ಸಂಪ್ರದಾಯ, ಜನ ಜೀವನವನ್ನು ದಸರಾ ಬೊಂಬೆಗಳು ಸಾರುತ್ತವೆ.
ಮನೆಗಳಲ್ಲಿ ಗೊಂಬೆ ಕೂರಿಸುವಾಗ ಸ್ಥಳಾವಕಾಶ ನೋಡಿಕೊಂಡು 3,5,7,9 ಹಂತಗಳಲ್ಲಿ ಕೂರಿಸುತ್ತಾರೆ. ಹೆಚ್ಚು ಗೊಂಬೆಗಳು ಹಾಗೂ ಸ್ಥಳಾವಕಾಶ ಇದ್ದವರು 9 ಹಂತಗಳಲ್ಲಿ ಕೂರಿಸಿದರೆ, ಇನ್ನು ಕೆಲವರು 7 ಹಂತಗಳಲ್ಲಿ, ಕೆಲವರು 5 ಹಂತಗಳಲ್ಲಿ ಕೂರಿಸುತ್ತಾರೆ. ಮೊದಲ ಅಂತಸ್ತಿನಲ್ಲಿ ಪಟ್ಟದ ಬೊಂಬೆ, ಕಲಶ, ಗಣಪತಿ, ಮನೆ ದೇವರು, ದೀಪಗಳು ಇವುಗಳನ್ನಿಟ್ಟು, ಎರಡು, ಮೂರು ಉಳಿದ ಅಂತಸ್ತುಗಳಲ್ಲಿ ಇತರ ಬೊಂಬೆಗಳನ್ನು ಜೋಡಿಸುತ್ತಾರೆ.
ಗೊಂಬೆ ಕೂರಿಸುವವರು ಪ್ರತೀ ವರ್ಷ ಹಳೆಯ ಗೊಂಬೆಯ ಜೊತೆಗೆ ಒಂದು ಜೋಡಿ ಹೊಸ ಗೊಂಬೆಯನ್ನು ಸೇರಿಸಿ ಗೊಂಬೆ ಕೂರಿಸಬೇಕು ಎನ್ನುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ವಾಡಿಕೆಯಾಗಿದ್ದು, ಹಾಗಾಗಿ ಪ್ರತಿಯೊಬ್ಬರು ಹಳೆ ಗೊಂಬೆ ಜೊತೆಗೆ ಹೊಸ ಗೊಂಬೆಯನ್ನು ಕೂಡ್ರಿಸುತ್ತಾರೆ. ಇತ್ತೀಚೆಗೆ ಹಳೆ ಸಂಪ್ರದಾಯದ ಬೊಂಬೆಗಳ ಜೊತೆ ಆಧುನಿಕ ಸ್ಪರ್ಶ ನೀಡಲಾಗುತ್ತಿದೆ. ಮರದ, ಮಣ್ಣಿನ ಗೊಂಬೆ ಜೊತೆಗೆ ಆಧುನಿಕ ಬೊಂಬೆಗಳನ್ನು ಪ್ರದರ್ಶನದಲ್ಲಿ ಬಳಸುತ್ತಿದ್ದಾರೆ. ಒಟ್ಟಾರೆ
ಇಂತಹ ಪ್ರದರ್ಶನಗಳು ನಮ್ಮ ಪರಂಪರೆ, ಸಂಪ್ರದಾಯವನ್ನು ಉಳಿಸಿ ಬೆಳೆಸಿಕೊಂಡು ಹೋಗುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ನಮ್ಮ ಮನೆಯಲ್ಲಿ ಸುಮಾರು 40 ವರ್ಷಗಳಿಂದ ದಸರಾ ಸಂದರ್ಭದಲ್ಲಿ ಬೊಂಬೆಗಳನ್ನು ಕೂಡ್ರಿಸುವ ಸಂಪ್ರದಾಯವಿದ್ದು, ಕಳೆದ 20 ವರ್ಷದಿಂದ ಹೊಸ ಮನೆಯಲ್ಲಿ ಜಾಗೆ ಹೆಚ್ಚಳವಾಗಿದ್ದರಿಂದ ಅದನ್ನು ಅಚ್ಚು ಕಟ್ಟಾಗಿ 7 ಹಂತದಲ್ಲಿ ಜೋಡಿಸಿ ಪ್ರದರ್ಶನ ಮಾಡುತ್ತೇವೆ. ನಮ್ಮ ಪರಂಪರೆ ಸಂಸ್ಕೃತಿ ಉಳಿದು ಬೆಳೆಯಲಿ ಎಂಬುದು ನಮ್ಮ ಆಶಯ. ಪ್ರದರ್ಶನ ನೋಡಲು ನಮ್ಮ ಆಪ್ತರು, ಸಂಬಂಧಿಕರು ಬಂದು ನೋಡಿ ಖುಷಿ ಪಡುತ್ತಾರೆ.– ವಂದನಾ ಮೋಹನ ಪತ್ತಾರ, ಬನಹಟ್ಟಿ
– ಕಿರಣ ಶ್ರೀಶೈಲ ಆಳಗಿ