Advertisement

ಸೆ. 21: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ 

03:55 AM Jul 05, 2017 | Karthik A |

ಮೈಸೂರು: ಅರಮನೆಗಳ ನಗರಿ ಮೈಸೂರು ಈ ವರ್ಷದ ದಸರಾ ಆಚರಣೆಗೆ ಸಜ್ಜಾಗುತ್ತಿದೆ. ಸೆ. 21ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯೊಂದಿಗೆ ಆರಂಭವಾಗುವ ನವರಾತ್ರಿ ಆಚರಣೆ ಸೆ. 30ರಂದು ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಯೊಂದಿಗೆ ಮುಕ್ತಾಯಗೊಳ್ಳಲಿದೆ.

Advertisement

ಮಂಗಳವಾರ ನಗರದಲ್ಲಿ ದಸರಾ ಮಹೋತ್ಸವ ಆಚರಣೆ ಸಂಬಂಧ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್‌.ಸಿ. ಮಹದೇವಪ್ಪ ಪೂರ್ವಸಿದ್ಧತ ಸಭೆ ನಡೆಸಿ ಮಾತನಾಡಿ, ಜು. 18 ಅಥವಾ 19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಸರಾ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ಈ ವರ್ಷದ ದಸರಾ ಮಹೋತ್ಸವದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next