ಖಚಿತವಾಗಿದ್ದು, ಈ ಬಾರಿ 8 ಆನೆಗಳನ್ನು ಕರೆತರಲು ಅರಣ್ಯ ಇಲಾಖೆ ನಿರ್ಧರಿಸಿದೆ.
Advertisement
ಕೋವಿಡ್ ಹಿನ್ನೆಲೆಯಲ್ಲಿ ಸತತ 2ನೇ ವರ್ಷವೂ ನಾಡಹಬ್ಬ ದಸರಾ ಸರಳ ಹಾಗೂ ಸಾಂಪ್ರದಾಯಿಕ ಆಚರಣೆಗಷ್ಟೇ ಸೀಮಿತಗೊಳಿಸಲಾಗಿದೆ. ಬೆಂಗಳೂರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ದಸರಾ ಉನ್ನತ ಸಮಿತಿ ಸಭೆಯಲ್ಲಿ ಜಂಬೂಸವಾರಿ ಮೆರವಣಿಗೆಯನ್ನು ಕಳೆದ ವರ್ಷದಂತೆ ಈ ಬಾರಿಯೂ ಅರಮನೆ ಅಂಗಳಕ್ಕಷ್ಟೇ ಸೀಮಿತಗೊಳಿಸಿರುವುದರಿಂದ ದಸರಾ ಗಜಪಡೆಯಲ್ಲಿ 8 ಆನೆಗಳುಸ್ಥಾನ ಪಡೆಯಲಿದೆ.
Related Articles
Advertisement
ಕೆಲ ದಿನಗಳ ಹಿಂದೆಯೇ ಅರಣ್ಯಾಧಿಕಾರಿಗಳ ತಂಡ ಎಲ್ಲ ಶಿಬಿರಗಳಿಗೆ ತೆರಳಿ, ಆನೆಗಳ ದೈಹಿಕ ಸದೃಢತೆ ಪರಿಶೀಲನೆ ನಡೆಸಿ 14 ಆನೆಗಳ ಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ8ಆನೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಗಜಪಡೆಗೆ ಈಗಾಗಲೇ ಅರಣ್ಯ ಇಲಾಖೆಯ ತಾಂತ್ರಿಕ ಸಮಿತಿ ಒಪ್ಪಿಗೆ ನೀಡಿದೆ. ಜಿಲ್ಲಾಡಳಿತಕ್ಕೆಈಕುರಿತುಮಾಹಿತಿರವಾನಿಸಲಾಗಿದೆ. ಜಿಲ್ಲಾ ಸಮಿತಿ ಹಾಗೂ ಪಿಸಿಸಿಎಫ್(ವನ್ಯಜೀವಿ) ಅನುಮತಿ ದೊರೆಯುವ ಸಾಧ್ಯತೆ ಇದೆ.
13ರಂದು ಸಪ್ತಮಿ ಶುಭ ದಿನ ಗಜಪಯಣ ಸಾಧ್ಯತೆಪ್ರಸಕ್ತ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಕರೆತರಲು ಮೂರು ದಿನಗಳನ್ನು ಪಟ್ಟಿ ಮಾಡಲಾಗಿದೆ. ಸೆ.13, 15 ಹಾಗೂ 16ರಂದು ಶುಭ ದಿನವಾಗಿದೆ. ಅದರಲ್ಲೂ ಸೆ.13 ಉತ್ತಮ ದಿನವಾಗಿದ್ದು, ಭಾದ್ರಪದ ಸಪ್ತಮಿ ದಿನ ಆಗಿರುವುದರಿಂದ ಗಜಪಯಣಕ್ಕೆ
ಒಳ್ಳೆಯ ದಿನ ಎನ್ನಲಾಗಿದೆ. ಸೆ.13ರಂದು ಬೆಳಗ್ಗೆ 11ರಂದು ಹುಣಸೂರು ತಾಲೂಕಿನ ವೀರನಹೊಸಳ್ಳಿ ಗೇಟ್ ಬಳಿ ಅಭಿಮನ್ಯು ನೇತೃತ್ವದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಮೈಸೂರಿನ ಅರಣ್ಯ ಭನವನಕ್ಕೆ ಕರೆತರಲಾಗುತ್ತದೆ. ಸೆ.16ರಂದು ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ಪೂಜೆ ಸಲ್ಲಿಸಿ, ನಂತರ ಅರಮನೆಗೆ ಕರೆದುಕೊಂಡು ಬರಲು ಉದ್ದೇಶಿಸಲಾಗಿದೆ ಇಂದು ಅಂತಿಮ ನಿರ್ಧಾರ
ದಸರಾ ಕಾರ್ಯಕಾರಿ ಸಮಿತಿ ಸಭೆ ನಗರದಲ್ಲಿ ಬುಧವಾರ ಮಧ್ಯಾಹ್ನ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ನಡೆಯಲಿದೆ. ಈ ವೇಳೆ ದಸರಾ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದ್ದು, ಗಜಪಡೆ ಕುರಿತು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದೇ ಸಂದರ್ಭದಲ್ಲಿ ಗಜಪಯಣ ಮತ್ತು ಸ್ವಾಗತ ಕಾರ್ಯಕ್ರಮದ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.