Advertisement

ಮೈಸೂರು ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ- ತನಿಖೆಗೆ ಸೂಚನೆ

11:27 PM Jun 03, 2021 | Team Udayavani |

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕೃತ ನಿವಾಸದಲ್ಲಿ 50 ಲಕ್ಷ ರೂ. ವೆಚ್ಚ ಮಾಡಿ ಈಜುಕೊಳ ಹಾಗೂ ಜಿಮ್ ನಿರ್ಮಾಣ ಮಾಡಿದ್ದಾರೆ ಎನ್ನಲಾದ  ವರದಿಗಳ ಬಗ್ಗೆ ತನಿಖೆ ನಡೆಸಿ 7 ದಿನಗಳಲ್ಲಿ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

Advertisement

ಜಿಲ್ಲಾಧಿಕಾರಿಗಳ ನಿವಾಸ ಪಾರಂಪರಿಕ ಕಟ್ಟಡವಾಗಿದ್ದು ಹೊಸ ಕಾಮಗಾರಿ ಕೈಗೊಳ್ಳಲು ಅವಕಾಶ ಇಲ್ಲ. ಹೀಗಾಗಿ ಪ್ರಕರಣದ ತನಿಖೆ ನಡೆಸುವಂತೆ ತಿಳಿಸಲಾಗಿದೆ.

ಶಾಸಕ ಸಾ.ರಾ.ಮಹೇಶ್  ಮುಖ್ಯಮಂತ್ರಿ ಅವರಿಗೆ ನೀಡಿದ್ದ ದೂರಿನ  ಮೇರೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಮೂಲಕ ಈ ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ; ಎಸಿಬಿ ಬಲೆಗೆ ಬಿಇಓ ಕಚೇರಿ ಎಫ್ ಡಿಎ

Advertisement

Udayavani is now on Telegram. Click here to join our channel and stay updated with the latest news.

Next