Advertisement

Mysore; ರಾಜ್ಯಪಾಲರು ಬಿಜೆಪಿ ಕೈಗೊಂಬೆ; ಇದಕ್ಕೆ ನಾನು ಹೆದರಲ್ಲ..: ಸಿಎಂ ಸಿದ್ದರಾಮಯ್ಯ

12:52 PM Aug 02, 2024 | Team Udayavani |

ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ. ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದು ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯೆ ನೀಡಿದರು.

Advertisement

ಸುದ್ದಿಗಾರರೊಂದಿಗೆ ಶುಕ್ರವಾರ (ಆ.2) ಮಾತನಾಡಿದ ಅವರು, 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು ನಾನು. ಆದರೆ ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು. ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದರು.

ರಾಜ್ಯಪಾಲರ ನೋಟಿಸ್ ಗೆ ನಾನ್ಯಾಕೆ ಹೆದರಲಿ. ಅಶೋಕ್ ಹೆದರಿರಬೇಕು. ಅವರಿಗೆ ಭಯ, ನನಗಲ್ಲ. ಟಿ.ಜೆ.ಅಹ್ರಾಂ ಒಬ್ಬ ಬ್ಲಾಕ್ ಮೇಲರ್. ಜುಲೈ 26 ಕ್ಕೆ ಬೆಳಿಗ್ಗೆ 11:30 ಕ್ಕೆ ದೂರು ಕೊಡುತ್ತಾನೆ. ಆ ದೂರಿನ ಪರಾಮರ್ಶೆ ಮಾಡದೆ ಆ ದಿನ ಸಂಜೆಯೇ ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಎಂದು ನಮ್ಮ ಅಧಿಕಾರಿ ಎಲ್‌ಕೆ ಅತೀಕ್ ಗೆ ಹೇಳುತ್ತಾರೆ. ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ದನ ರೆಡ್ಡಿ ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗೆ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ನನಗೆ ಯಾಕೆ ತರಾತುರಿಯಲ್ಲಿ ನೋಟಿಸ್ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಬಿಜೆಪಿ ಪಾದಯಾತ್ರೆ‌ಗೆ ಬೆಂಬಲ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿ ಕೇಂದ್ರದ ಮಂತ್ರಿ, ಜೆಡಿಎಸ್ ನಾಯಕ. ಈ ಕೇಸ್‌ ನಲ್ಲಿ ಏನು ಇಲ್ಲ ಪಾದಯಾತ್ರೆ ಬೇಡ ಎಂದರು. ಮಳೆ ಜಾಸ್ತಿಯಾಗಿ ಪ್ರವಾಹ ಬಂದಿದೆ ಅದರ ಕಡೆ ಗಮನ ಕೊಡಬೇಕು ಎಂದರು. ಈಗ ಪ್ರವಾಹ ಎಲ್ಲಾ ಹೋಗಿದೆಯಾ? ಕುಮಾರಸ್ವಾಮಿ ಇದನ್ನು ಸ್ವಇಚ್ಛೆಯಿಂದ ಮಾಡುತ್ತಿಲ್ಲ. ಇದನ್ನೆಲ್ಲಾ ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next