Advertisement
ಮಾ.26 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮಾ.27ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು, ಮಾ.29 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಏ.18ರಂದು ಮತದಾನ ನಡೆಯಲಿದೆ. ಮೇ 23ರಂದು ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.
Related Articles
Advertisement
ಅಧಿಕಾರಿಗಳ ನೇಮಕ: ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಅಗತ್ಯ ಮತಗಟ್ಟೆ ಅಧಿಕಾರಿಗಳನ್ನು ಹಾಗೂ ಮೀಸಲು ಸಿಬ್ಬಂದಿ ನೇಮಕ ಮಾಡಲು, ಕೇಂದ್ರ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಆಯ್ದ ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್ ಆಗಿ ನೇಮಕ ಮಾಡಲು ಕ್ರಮವಹಿಸಲಾಗಿದೆ.
ತಂಡಗಳ ರಚನೆ: ಮಾದರಿ ನೀತಿ ಸಂಹಿತೆ ಹಾಗೂ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾ ಇಡಲು ಸೆಕ್ಟರ್ ಅಧಿಕಾರಿ, ಪ್ಲೆ„ಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೆಲೆನ್ಸ್ ಟೀಮ್, ವೀಡಿಯೋ ವೀವಿಂಗ್ ಟೀಮ್, ಸಹಾಯಕ ಚುನಾವಣಾ ಅಬ್ಸರ್ವರ್‌ಗಳ ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಕೆ.ಜ್ಯೋತಿ, ಪಾಲಿಕೆ ಆಯುಕ್ತರಾದ ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮಾಹಿತಿಗೆ ಹೆಲ್ಪ್ಲೈನ್‌ಗೆ ಕರೆ ಮಾಡಿ: ಚುನಾವಣಾ ಆಯೋಗದ ಸೂಚನೆಯಂತೆ ಮೈಸೂರು ಜಿಲ್ಲೆಯ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರ ಸೌಲಭ್ಯ ಕೇಂದ್ರ 1950 ಸಹಾಯವಾಣಿ ಪ್ರಾರಂಭವಾಗಿದ್ದು, ಈ ಕೇಂದ್ರವು ದಿನದ 24 ಗಂಟೆ ಕಾರ್ಯ ನಿರ್ವಹಿಸಲಿದೆ.
ಸಾರ್ವಜನಿಕರು ಈ ಉಚಿತ ದೂರವಾಣಿಗೆ ಕರೆ ಮಾಡಿ ಮತದರರ ಪಟ್ಟಿಗೆ ಸಂಬಂಧಿಸಿದಂತೆ ಅವಶ್ಯಕ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಜಿಲ್ಲೆಯ ಎಲ್ಲಾ ಮತಗಟ್ಟೆಗಳಿಗೆ ಅಗತ್ಯ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ, ರ್‍ಯಾಂಪ್ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು.