Advertisement
ಕಳೆದೊಂದು ವಾರದಿಂದ ಕೇರಳದ ವಯನಾಡ್ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಬಿನಿ ಜಲಾಶಯಕ್ಕೆ ‘ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯ ಭರ್ತಿಯಾಗುವ ಸೂಚನೆ ಕಂಡುಬಂದಿದ್ದು, ಪರಿಣಾಮ ಡ್ಯಾಂನಿಂದ ಕಪಿಲ ನದಿಗೆ 14 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ.
Related Articles
Advertisement
ಪ್ರವಾಹ ಭೀತಿ: ಕೇರಳ ವೈನಾಡು ‘ಭಾಗದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆ ಮೈದುಂಬಿರುವ ಕಪಿಲಾ ನದಿ, ನೆರೆ ಭೀತಿ ಸೃಷ್ಟಿಸಿದೆ. ಕಬಿನಿ ಜಲಾಶಯದಿಂದ 14 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದ್ದು, ನದಿ ತಟದಲ್ಲಿ ಪ್ರವಾಹ ಉಂಟಾಗುವ ಭೀತಿ ಎದುರಾಗಿದೆ.
‘ಭರ್ತಿಯಾಗುವ ಹಂತಕ್ಕೆ ಹಾರಂಗಿ : ಕೊಡಗು ಭಾಗದಲ್ಲಿ ‘ಧಾರಾಕಾರ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಈಗಾಲೇ ಹಾರಂಗಿ ಜಲಾಶಯ ‘ಭರ್ತಿಯಾಗುವ ಹಂತಕ್ಕೆ ತಲುಪಿದ್ದು, 159 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹಾರಂಗಿ ಡ್ಯಾಂ ತುಂಬಲು 04 ಅಡಿಯಷ್ಟೇ ಬಾಕಿ ಇದೆ. ಪ್ರಸ್ತುತ 6494 ಕ್ಯೂಸೆಕ್ ನೀರಿನ್ನು ಕಾವೇರಿ ನದಿಗೆ ಬಿಡಲಾಗಿದೆ.
ಜಿಲ್ಲೆಯಲ್ಲಿ ಹರಿಯುವ ಕಾವೇರಿ, ಕಪಿಲಾ, ಲಕ್ಷ್ಮಣತೀರ್ಥ ನದಿಗಳ ನೀರಿನ ಪ್ರಮಾಣ ಏರಿಕೆಯಾಗಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಅನೇಕ ಜನವಸತಿ ಪ್ರದೇಶಗಳು ಮುಳುಗಡೆಯಾಗುವ ಆತಂಕ ಎದುರಾಗಿದೆ. ಇತ್ತ ಕಾವೇರಿ ಕೊಳ್ಳದಲ್ಲೂ ಮಳೆರಾಯ ಅಬ್ಬರಿಸುತ್ತಿದ್ದು, ಲಕ್ಷ್ಮಣ ತೀರ್ಥ ನದಿಯಲ್ಲೂ ನೀರಿನ ಪ್ರಮಾಣ ಏರಿಕೆಯಾಗಿದ್ದು, ಕೃಷಿ ‘ ಭೂಮಿ ಮುಳುಗಡೆಯಾಗುವ ಸಾಧ್ಯತೆ ಎದುರಾಗಿದೆ.
ಒಟ್ಟಾರೆ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಜಿಲ್ಲೆಯ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಎಚ್.ಡಿ. ಕೋಟೆ ತಾಲೂಕಿನ ಕಬಿನಿ, ತಾರಕ, ಸರಗೂರು ತಾಲೂಕಿನ ನುಗು ಜಲಾಶಯಗಳಿಗೆ ಒಳ ಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ.
ಇದನ್ನೂ ಓದಿ : ಉಡುಪಿ: ಗೃಹರಕ್ಷಕದಳದ ಕಮಾಂಡೆಂಟ್ ಡಾ| ಕೆ. ಪ್ರಶಾಂತ್ ಶೆಟ್ಟಿ ಅವರಿಗೆ ಚಿನ್ನದ ಪದಕ ಪ್ರಧಾನ