Advertisement

ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ : ಕಪಿಲ ನದಿ ಪಾತ್ರದಲ್ಲಿ ಪ್ರವಾಹ ಭೀತಿ

08:23 PM Jul 15, 2021 | Team Udayavani |

ಮೈಸೂರು : ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಜಲಾಶಯ ತುಂಬಲು ಕೇವಲ ಮೂರು ಅಡಿ ಮಾತ್ರ ಬಾಕಿ ಇದೆ.  ಕಪಿಲ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾದರೆ, ಕೊಡಗಿನ ಹಾರಂಗಿ ಡ್ಯಾಂ ಭರ್ತಿಗೆ 04 ಅಡಿ ಬಾಕಿ ಇದೆ.

Advertisement

ಕಳೆದೊಂದು ವಾರದಿಂದ ಕೇರಳದ ವಯನಾಡ್ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಬಿನಿ ಜಲಾಶಯಕ್ಕೆ ‘ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯ ಭರ್ತಿಯಾಗುವ ಸೂಚನೆ ಕಂಡುಬಂದಿದ್ದು, ಪರಿಣಾಮ ಡ್ಯಾಂನಿಂದ ಕಪಿಲ ನದಿಗೆ 14 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ.

ಇದನ್ನೂ ಓದಿ : ಕ್ರೈಸ್ತ ಉದ್ಯಮಿ ಕಟ್ಟಿಸಿದ ವಿನಾಯಕ ದೇಗುಲ ಸಮಾಜಕ್ಕೆ ಸಿದ್ಧಿಯನ್ನು ನೀಡಲಿ: ಪಲಿಮಾರು ಶ್ರೀ

ಪ್ರಸ್ತುತ ಕಬಿನಿ ಜಲಾಶಯಕ್ಕೆ 18 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿಗೆ 14 ಸಾವಿರ ಕ್ಯೂಸೆಕ್ ಹರಿ ಬಿಡಲಾಗಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾದಂತೆ ನದಿಗೆ ನೀರು ಹರಿಸುವ ಪ್ರಮಾಣ ಹೆಚ್ಚಾಾಗಲಿದ್ದು, ಪರಿಸ್ಥಿತಿ ನೋಡಿಕೊಂಡು ಮತ್ತಷ್ಟು ನೀರನ್ನು ನದಿಗೆ ಹರಿ ಬಿಡುವ ಸಾಧ್ಯತೆ ಇದೆ.

ಜಲಾಶಯಕ್ಕೆ ಗುರುವಾರ ಸಂಜೆ ವೇಲೆಗೆ 15,861 ಕ್ಯೂಸೆಕ್ ನೀರು ಹರಿದು ಬರುತಿದ್ದು, ರಾತ್ರಿ ವೇಳೆಗೆ  ನೀರಿನ ಹರಿವಿನ ಪ್ರಮಾಣ 18 ಸಾವಿರಕ್ಕೆ ಏರಿಕೆಯಾಗಿದೆ. ಶುಕ್ರವಾರ ಮತ್ತಷ್ಟು ಹೆಚ್ಚಾಾಗಲಿದೆ. ಕಬಿನಿ ಜಲಾಶಯ 2284.00 ಅಡಿಗಳಷ್ಟು ಗರಿಷ್ಠ ನೀರಿನ ಸಂಗ್ರಹಣ ಸಾಮರ್ಥ್ಯ ಹೊಂದಿದ್ದು, ಪ್ರಸ್ತುತ 2280.12 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಶುಕ್ರವಾರಕ್ಕೆ ಈ ಪ್ರಮಾಣ ಮತ್ತಷ್ಟು ಏರಿಕೆಯಾಗಲಿದೆ. ಪರಿಣಾಮ ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಿದೆ.

Advertisement

ಪ್ರವಾಹ ಭೀತಿ: ಕೇರಳ ವೈನಾಡು ‘ಭಾಗದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆ ಮೈದುಂಬಿರುವ ಕಪಿಲಾ ನದಿ, ನೆರೆ ಭೀತಿ ಸೃಷ್ಟಿಸಿದೆ. ಕಬಿನಿ ಜಲಾಶಯದಿಂದ 14 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದ್ದು, ನದಿ ತಟದಲ್ಲಿ ಪ್ರವಾಹ ಉಂಟಾಗುವ ಭೀತಿ ಎದುರಾಗಿದೆ.

‘ಭರ್ತಿಯಾಗುವ ಹಂತಕ್ಕೆ ಹಾರಂಗಿ : ಕೊಡಗು ಭಾಗದಲ್ಲಿ ‘ಧಾರಾಕಾರ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಈಗಾಲೇ ಹಾರಂಗಿ ಜಲಾಶಯ ‘ಭರ್ತಿಯಾಗುವ ಹಂತಕ್ಕೆ ತಲುಪಿದ್ದು, 159 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹಾರಂಗಿ ಡ್ಯಾಂ ತುಂಬಲು 04 ಅಡಿಯಷ್ಟೇ ಬಾಕಿ ಇದೆ. ಪ್ರಸ್ತುತ 6494 ಕ್ಯೂಸೆಕ್ ನೀರಿನ್ನು ಕಾವೇರಿ ನದಿಗೆ ಬಿಡಲಾಗಿದೆ.

ಜಿಲ್ಲೆಯಲ್ಲಿ ಹರಿಯುವ ಕಾವೇರಿ, ಕಪಿಲಾ, ಲಕ್ಷ್ಮಣತೀರ್ಥ ನದಿಗಳ ನೀರಿನ ಪ್ರಮಾಣ ಏರಿಕೆಯಾಗಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಅನೇಕ ಜನವಸತಿ ಪ್ರದೇಶಗಳು ಮುಳುಗಡೆಯಾಗುವ ಆತಂಕ ಎದುರಾಗಿದೆ. ಇತ್ತ ಕಾವೇರಿ ಕೊಳ್ಳದಲ್ಲೂ ಮಳೆರಾಯ ಅಬ್ಬರಿಸುತ್ತಿದ್ದು, ಲಕ್ಷ್ಮಣ ತೀರ್ಥ ನದಿಯಲ್ಲೂ ನೀರಿನ ಪ್ರಮಾಣ ಏರಿಕೆಯಾಗಿದ್ದು, ಕೃಷಿ ‘ ಭೂಮಿ ಮುಳುಗಡೆಯಾಗುವ ಸಾಧ್ಯತೆ ಎದುರಾಗಿದೆ.

ಒಟ್ಟಾರೆ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಜಿಲ್ಲೆಯ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಎಚ್.ಡಿ. ಕೋಟೆ ತಾಲೂಕಿನ ಕಬಿನಿ, ತಾರಕ, ಸರಗೂರು ತಾಲೂಕಿನ ನುಗು ಜಲಾಶಯಗಳಿಗೆ ಒಳ ಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ.

ಇದನ್ನೂ ಓದಿ : ಉಡುಪಿ: ಗೃಹರಕ್ಷಕದಳದ ಕಮಾಂಡೆಂಟ್ ಡಾ| ಕೆ. ಪ್ರಶಾಂತ್ ಶೆಟ್ಟಿ ಅವರಿಗೆ ಚಿನ್ನದ ಪದಕ ಪ್ರಧಾನ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next