Advertisement

ಕರಡಿಲಕ್ಕನ ಕೆರೆ ಏತನೀರಾವರಿ ಘಟಕದಿಂದ  ನೀರು ಬಿಡುವ ಕಾರ್ಯಕ್ಕೆ ಶಾಸಕ ಕೆ.ಮಹದೇವ್ ಚಾಲನೆ

06:26 PM Jul 29, 2021 | |

ಪಿರಿಯಾಪಟ್ಟಣ :ತಾಲೂಕಿನ ಚನ್ನಕೇಶವಪುರ ಗ್ರಾಮದಲ್ಲಿರುವ ಕರಡಿಲಕ್ಕನ ಕೆರೆ ಏತ ನೀರಾವರಿ ಯೋಜನೆ ವತಿಯಿಂದ ಕಾಲುವೆಗಳಿಗೆ ನೀರುಣಿಸುವ ಕಾರ್ಯಕ್ರಮಕ್ಕೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದಾಧ್ಯಂತ ಉತ್ತಮ ಮಳೆಯಾಗುತ್ತಿರುವುದರಿಂದ ಕೆರೆಕಟ್ಟೆಗಳು ಭರ್ತಿಯಾಗುತ್ತಿರುವುದು ರೈತರ ಮುಗದಲ್ಲಿ ಆಶಾಭಾವನೆ ಮಾಡಿ ಕೃಷಿ ಚಟುವಟಿಕೆಯತ್ತ ಮುಖ ಮಾಡಿದ್ದಾರೆ. ನೆರೆಯ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ ಸೇರಿದಂತೆ ನದಿ ಪ್ರಾಂತ್ಯದ ತಾಲೂಕಿನ ಅನೇಕ ಕೆರೆಕಟ್ಟೆಗಳು ತುಂಬಿ ಹರಿಯುತ್ತಿರುವುದರಿಂದ ರೈತರ ಜಮೀನಿನಲ್ಲಿ ಬೆಳೆ ಬೆಳೆಯಲು ನೀರು ಸರಬರಾಜು ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ, ಇದರಿಂದ ರೈತರ ವ್ಯವಸಾಯಕ್ಕೆ ಅನುಕೂಲವಾಗುತ್ತದೆ. ಅದೇ ರೀತಿ ಶೀಘ್ರದಲ್ಲಿ ತಾಲ್ಲೂಕಿನಲ್ಲಿ 150 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಪೂರ್ಣಗೊಳ್ಳಲಿದ್ದು ಕಾಮಗಾರಿ ಮುಗಿದ ಕೂಡಲೇ ಮುಖ್ಯಮಂತ್ರಿಗಳನ್ನು ಕರೆ ತಂದು  ಚಾಲನೆ ನೀಡಲಾಗುವುದು ಎಂದರು.

ಇದನ್ನೂ ಓದಿ : ಡಾ.ಅಶ್ವತ್ಥನಾರಾಯಣ ನಿರ್ವಹಿಸಿದ್ದ ಇಲಾಖೆಗಳ ಕಡತ ಬಾಕಿ ಶೂನ್ಯ: ಎಲ್ಲ 3,760 ಕಡತ ವಿಲೇವಾರಿ

ರೈತರರಿಗೆ ತೊಂದರೆಯಾದರೆ ಅಧಿಕಾರಿಗಳೆ ಹೊಣೆ

ಅಧಿಕಾರಿಗಳು ರೈತರ ಜಮೀನುಗಳಿಗೆ ಯಾವುದೇ ತೊಂದರೆಯಾಗದಂತೆ ಸಮರ್ಪಕವಾಗಿ ನೀರನ್ನು ಒದಗಿಸಬೇಕು, ರೈತರ ಕಷ್ಟ ಸುಖಗಳಿಗೆ ಸ್ಪಂದಿಸದೆ ತಾತ್ಸಾರ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ದ  ಶಿಸ್ತು ಕ್ರಮ ಕೈಗೊಳ್ಳಲಾಗುವುದು ಯಾವುದೇ ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಆದಷ್ಟು ಬೇಗನೆ ಬಗೆಹರಿಸಿಕೊಂಡು ರೈತರ ಜಮೀನಿಗೆ ನಿರಂತರವಾಗಿ ಅಗತ್ಯವಾದ ನೀರಿನ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

Advertisement

ಈ ಸಂದರ್ಭದಲ್ಲಿ ತಾ.ಪಂ.ಸಿ.ಆರ್.ಕೃಷ್ಣಕುಮಾರ್ ಕಾವೇರಿ ನೀರಾವರಿ ನಿಗಮದ ಎಇಇ ನವೀನ್, ಲೋಕೋಪಯೋಗಿ ಇಲಾಖೆಯ ಎಇಇ ಜಯಂತ್,  ಜಿ.ಪಂ.ಎಇಇ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸಿದ್ದೇಗೌಡ, ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೆಶಕ ಸೋಮಯ್ಯ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಯ್ಯಶೆಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು

29ಪಿವೈಪಿ01 : ಪಿರಿಯಾಪಟ್ಟಣ ತಾಲೂಕಿನ ಚನ್ನಕೇಶವಪುರ ಗ್ರಾಮದಲ್ಲಿರುವ ಕರಡಿಲಕ್ಕನ ಕೆರೆ ಏತ ನೀರಾವರಿಯಿಂದ ಕಾಲುವೆಗಳಿಗೆ ನೀರುಣಿಸುವ ಕಾರ್ಯಕ್ರಮಕ್ಕೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು.

ಇದನ್ನೂ ಓದಿ : HRP ಬ್ರಹ್ಮಾಂಡ ಭ್ರಷ್ಟಾಚಾರ : ಕಾಂಗ್ರೆಸ್ ಮುಖಂಡ ಡಿ.ಸಿ.ಸಣ್ಣಸ್ವಾಮಿ ಅಕ್ರೋಶ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next