ಮೈಸೂರು: ರಾಜ್ಯದಲ್ಲಿ ಡಿಸಿಎಂ ಆಯ್ಕೆ ವಿಚಾರದ ಈ ಚರ್ಚೆ ಸದ್ಯ ಅಪ್ರಸ್ತುತ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬೇರೆ ಯಾರು ಈ ಬಗ್ಗೆ ಮಾತನಾಡಬಾರದು ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದ ಮೇಲೆ ಈಗ ಯಾರು ತುಟಿಪಿಟಿಕ್ ಎನ್ನುತಿಲ್ಲ. ಹೀಗಾಗಿ ಡಿಸಿಎಂ ಆಯ್ಕೆ ವಿಚಾರವೇ ಅಪ್ರಸ್ತುತ ಎಂದರು.
ಅಯೋಧ್ಯೆ ವಿಚಾರವಾಗಿ ಸಿದ್ದರಾಮಯ್ಯರನ್ನು ಟಿಕೀಸುವ ನೈತಿಕತೆ ಬಿಜೆಪಿಗಿಲ್ಲ. ಸಿದ್ದರಾಮಯ್ಯ ನಾನು ಆಸ್ತಿಕ, ನಾಸ್ತಿಕ ಅಲ್ಲ ಎಂದು ಅವರೇ ಹೇಳಿದ್ದಾರೆ. ಅವರು ನಾಸ್ತಿಕರಾಗಿದ್ದರೆ ಅವರ ಕ್ಷೇತ್ರದಲ್ಲಿ ರಾಮಮಂದಿರ ಕಟ್ಟುತ್ತಿರಲಿಲ್ಲ. ದೇವಸ್ಥಾನಗಳಿಗೆ ಅನುದಾನ ನೀಡುತ್ತಿರಲಿಲ್ಲ. ರಾಜ್ಯದ ಅನೇಕ ದೇವಾಲಯಗಳಿಗೆ ಸಿದ್ದರಾಮಯ್ಯ ಅನುದಾನ ನೀಡಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ರಾಮ ನಮ್ಮ ಮನಸ್ಸಿನಲ್ಲಿದ್ದಾನೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ರಾಹುಲ್ ಗಾಂಧಿ ನ್ಯಾಯ್ ಯಾತ್ರೆ ತಡೆಗೆ ಯತ್ನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಗೂಂಡಾಗಳಿಗೆ ಬಡಿಗೆ ನೀಡಿ ಯಾತ್ರೆ ನಿಲ್ಲಿಸಲು ಯತ್ನಿಸಿದ್ದಾರೆ. ಯಾತ್ರೆಯಲ್ಲಿ ಮೋದಿ ಶ್ರೀರಾಮನಿಗೆ ಜೈಕಾರ ಕೂಗಿ ಪ್ರಚೋದಿಸಲು ಯತ್ನಿಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಯಾತ್ರೆ ನಿಲ್ಲುವುದಿಲ್ಲ. ಬಿಜೆಪಿಯ ಯಾವುದೇ ಆಟ ನಡೆಯುವುದಿಲ್ಲ ಎಂದರು.
ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಅಡ್ಡಿ ವಿಚಾರವನ್ನು ಘಟನೆ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ಮೈಸೂರಿನ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಸಿ ಎನ್ ಬಸವೇಗೌಡ, ಆರ್ ಮೂರ್ತಿ, ಸುಶ್ರುತ್ ಗೌಡ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾದರು.