Advertisement

UPSC ಫಲಿತಾಂಶ: 465ನೇ ರ‍್ಯಾಂಕ್ ಪಡೆದ ಮೈಸೂರು ಮೂಲದ ಕೆ.ಟಿ. ಮೇಘನಾ

12:11 AM Aug 05, 2020 | Hari Prasad |

ಮೈಸೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ದೇಶದ ಅತ್ಯುನ್ನತ ನಾಗರೀಕ ಸೇವೆಗಳ ನೇಮಕಕ್ಕೆ 2019ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಮೈಸೂರು ಮೂಲದ ಕೆ.ಟಿ. ಮೇಘನಾ 465ನೇ ರ‍್ಯಾಂಕ್‍ ಪಡೆದು ಸಾಧನೆ ಮಾಡಿದ್ದಾರೆ.

Advertisement

ಮೇಘನಾ ಅವರು ತಾಂಡವಮೂರ್ತಿ ಹಾಗೂ ನವನೀತ ದಂಪತಿ ಪುತ್ರಿಯಾಗಿದ್ದು, ಇವರ ಹೆತ್ತವರು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕುಡುಕೂರು ಮೂಲದವರಾದ್ದಾರೆ. ಸದ್ಯ ಮೇಘನಾ ಅವರು ತಮ್ಮ ಹೆತ್ತವರೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.

ತನಗಿರುವ ದೃಷ್ಠಿ ಸಮಸ್ಯೆಯ ನಡುವೆಯೂ ಮೇಘನಾ ಅವರು ಯುಪಿಎಸ್ಸಿಯಲ್ಲಿ ಈ ಸಾಧನೆ ಮಾಡಿರುವುದು ಪ್ರಶಂಸನೀಯವಾಗಿದೆ.

ಮೇಘನಾ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ರೆಟಿನಾ ಸಮಸ್ಯೆ ಎದುರಾಗಿ, ಶೇ.70ರಷ್ಟು ಕಣ್ಣಿನ ದೃಷ್ಟಿ ಸಾಮರ್ಥ್ಯವನ್ನು ಕಳೆದುಕೊಂಡಿದ್ದರು. ಆದರೆ ತಮ್ಮಗಿರುವ ಈ ವೈಕಲ್ಯವನ್ನು ಮೆಟ್ಟಿನಿಂತು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ.

ತಮ್ಮ ಶಾಲಾ-ಕಾಲೇಜು ಶಿಕ್ಷಣವನ್ನು ಬೆಂಗಳೂರಿನಲ್ಲಿ ಮುಗಿಸಿದ್ದ ಮೇಘನಾ, 2015ನೇ ಬ್ಯಾಚ್‍ನಲ್ಲಿ 11ನೇ ರ‍್ಯಾಂಕ್‍ನಲ್ಲಿ ಕೆಎಎಸ್‍ ಪರೀಕ್ಷೆಯಲ್ಲಿ ಪಾಸಾಗಿದ್ದರು.

Advertisement

ಸದ್ಯ ಮೂರು ತಿಂಗಳಿನಿಂದ ಬೆಂಗಳೂರಿನಲ್ಲಿ ಖಜಾನೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next