ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾಳಗವನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗ ನೋಡಲು ಸಿಕ್ಕಿದ್ದು 15 ಸೆಕೆಂಡ್ ಮಾತ್ರ!
ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ ಸಲ್ಲಿಸಿದ ಕೂಡಲೇ ಕಾಳಗ ಪ್ರಾರಂಭಗೊಂಡಿತು.
ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಜ್ ಜಟ್ಟಿ ಎದುರಾಳಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿಯ ತಲೆಭಾಗಕ್ಕೆ ವಜ್ರನಖದಿಂದ ಹೊಡೆದು ಕ್ಷಣಾರ್ಧದಲ್ಲೇ ರಕ್ತ ಚಿಮ್ಮಿಸುವ ಮೂಲಕ ಮುಕ್ತಾಯಗೊಂಡಿತು.
ಇದನ್ನೂ ಓದಿ:ಹಿಮಾಚಲಕ್ಕೆ ಎರಡು ದೊಡ್ಡ ಗಿಫ್ಟ್ ಸಿಕ್ಕಿದೆ : ಬಿಲಾಸ್‌ಪುರದಲ್ಲಿ ಪ್ರಧಾನಿ ಮೋದಿ
ಈ ಬಾರಿ ಮೈಸೂರಿನ ಉಸ್ತಾದ್ ಟೈಗರ್ ಬಾಲಾಜಿ ಅವರ ಮಗ ಮೈಸೂರಿನ ವಿಷ್ಣು ಜಟ್ಟಿ ಮತ್ತು ಬೆಂಗಳೂರಿನ ಉಸ್ತಾದ್ ಕೃಷ್ಣ ಶೆಟ್ಟಿ ಶಿಷ್ಯ ತಾರಾನಾಥ ಜೆಟ್ಟಿ ನಡುವೆ ಕಾಳಗ ನಡೆಯಿತು. ಎರಡನೇ ಜೋಡಿಯಾಗಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿ ಮತ್ತು ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಹರ ಜಟ್ಟಿ ನಡುವೆ ಕಾಳಗ ಜರುಗಿತು.