ಮೈಸೂರು: ಮೈಸೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ನಗರದ ಹೊರ ವರ್ತುಲದಲ್ಲಿ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ (ಭೈರತಿ) ಹೇಳಿದರು.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಮೈಸೂರು ನಗರಾಭಿವದ್ಧಿ ಪ್ರಾಧಿಕಾರದ ವತಿಯಿಂದ ನಗರದ ಹೊರ ವರ್ತುಲ ರಸ್ತೆ ನಿರ್ಮಿಸುವ ಹಾಗೂ ಮೈಸೂರು- ಬೆಂಗಳೂರು ರಸ್ತೆಯ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ಫ್ಲೈ ಓವರ್ ನಿರ್ಮಿಸುವ ಕುರಿತ ವಿಸ್ತೃತ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದದರು.
ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣ: ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ನಗ ರ ಪ್ರವೇಶಿ ಸುವ ಸ್ಥಳ ವಾದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ ಅವರಿಂದ ಫ್ಲೈ ಓವರ್ ನಿರ್ಮಾಣ ಮಾಡಲಾಗು ತ್ತಿದ್ದು, ನಿರ್ಮಾಣ ಕಾಮಗಾರಿಯು ವೈಜ್ಞಾನಿಕವಾಗಿ ನಿರ್ಮಾಣ ವಾಗಬೇಕು. ಮೈಸೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ನಗರದ ಟ್ರಾಫಿಕ್‌ಸಮಸ್ಯೆ ನಿವಾರಣೆಗೆ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗು ತ್ತಿದೆ. ಪೆರಿಫೆರಲ್ ರಿಂಗ್ ರೋಡ್‌ಗೆ ಭೂಮಿ ನೀಡಿದವರಿಗೆ ಆ ಜಾಗದ ಬೆಲೆಯ ಹಣ ಅಥವಾ ಬೇರೆ ಭೂಮಿಯನ್ನು ನೀಡಲು ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.
ಸರ್ವಿಸ್ ರಸ್ತೆ ಕಲ್ಪಿಸಲು ಅನುಕೂಲ: ಜಿಲ್ಲಾ ಉಸ್ತು ವಾರಿ ಸಚಿವ ಡಾ.ಎ ಚ್.ಸಿ.ಮಹದೇವಪ್ಪ ಮಾತ ನಾಡಿ, ಬೆಂಗಳೂರು- ಮೈಸೂರು ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆಯನ್ನು ಸರ್ವೇ ಮೂಲಕ ಗುರುತಿಸಿಕೊಳ್ಳಿ, ಇದರಲ್ಲಿ ಬೆಂಗಳೂರು ಕಡೆಯಿಂದ ಬಂದು ತಿ. ನರಸೀಪುರ, ಹುಣಸೂರು, ನಂಜನಗೂಡು ಕಡೆಗೆ ಹೋಗುವ ವಾಹನಗಳ ಸಂಖ್ಯೆ ತಿಳಿದರೆ ರಸ್ತೆ ಸೌಲಭ್ಯ, ಸರ್ವಿಸ್ ರಸ್ತೆ ಕಲ್ಪಿಸಲು ಅನುಕೂಲವಾಗುತ್ತದೆ ಎಂದರು.
ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆ: ಮೈಸೂರು ಜಿಲ್ಲೆಯು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆಯಾಗಿದೆ. ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ನಿರ್ಮಾಣವಾಗುವ ರಸ್ತೆಗಳು, ಫ್ಲೈ ಓವರ್‌ಗಳು ಮುಂದಿನ 20 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಮಾಡಬೇಕು. ಗುಜರಾತ್, ಮಹಾರಾಷ್ಟ್ರದ ಅಧಿಕಾರಿ ಗಳು ಮೈಸೂರಿನ ಇನ್ಫ್ರಾಸ್ಟ್ರಕ್ಚರ್ ಅಧ್ಯಯನ ಮಾಡಲು ಜಿಲ್ಲೆಗೆ ಭೇಟಿ ನೀಡಿ, ಇದನ್ನು ತಮ್ಮ ರಾಜ್ಯಗಳಲ್ಲಿ ಅಳವಡಿಸಿಕೊಳ್ಳಲು ವರದಿ ತಯಾರಿಸಿ ಕೊಳ್ಳುತ್ತಾರೆ. ನಗರದಲ್ಲಿ ಅಗತ್ಯ ಇರುವೆಡೆ ಸ್ಕೈವಾಕ್ ಗಳನ್ನು ನಿರ್ಮಿಸಲು ಯೋಜನೆ ತಯಾರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಾಸಕ ಕೆ. ಹರೀಶ್ ಗೌಡ, ನಗರಾ ಭಿವೃದ್ದಿ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಎಂ.ಎನ್. ಅಜಯ್ ನಾಗಭೂಷಣ್, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.