Advertisement

Mysore; ಮಹಿಷ ದಸರಾ ಮತ್ತು ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಿದ ಪೊಲೀಸರು

06:22 PM Oct 10, 2023 | Team Udayavani |

ಮೈಸೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮಹಿಷ ದಸರಾ ಮತ್ತು ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಎರಡೂ ಕಾರ್ಯಕ್ರಮಗಳಿಗೂ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.

Advertisement

ಮಹಿಷ ದಸರಾ ಆಚರಣಾ ಸಮಿತಿಗೆ ನಿರಾಕರಣೆ ಮಾಡಿರುವ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಚಾಮುಂಡಿ ಬೆಟ್ಟ ಚಲೋ ಜಾಥಾಗೂ ಅನುಮತಿ ನೀಡಿಲ್ಲ.

ಅಕ್ಟೋಬರ್ 13 ರಂದು ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ಬೆಳಿಗ್ಗೆ 9-30 ಗಂಟೆಗೆ ಮಹಿಷನ ಪ್ರತಿಮೆಗೆ ಮುಷ್ಪಾರ್ಚನೆ ಮಾಡಲು ತೀರ್ಮಾನಿಸಲಾಗಿತ್ತು. ಚಾಮುಂಡಿ ಬೆಟ್ಟದ ತಪ್ಪಲಿನ ಮುಖ್ಯ ದ್ವಾರ ತಾವರೆಕಟ್ಟೆ ಬಳಿಯಿಂದ ಜಾಥಾ‌ ನಡೆಸಿ, ಮೃಗಾಲಯದ ರಸ್ತೆ ಮೂಲಕ ಮೆರವಣಿಗೆ ಮಾಡಿ ಪುರಭವನದ ಅಂಬೇಡ್ಕರ್ ಮತ್ಥಳಿಗೆ ಮಾಲಾರ್ಪಣೆ ಮಾಡಲು ತೀರ್ಮಾನಿಸಲಾಗಿತ್ತು. ಅದೇ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮ ನಡೆಸಲು ಆಯೋಜನೆ ಮಾಡಲಾಗಿತ್ತು.  ಈ ಸಂಬಂಧ ಪೊಲೀಸ್ ಇಲಾಖೆ ಅನುಮತಿ ನೀಡುವಂತೆ ಮಹಿಷ ದಸರಾ ಆಚರಣಾ ಸಮಿತಿ ಮನವಿ ಮಾಡಿತ್ತು.

ಮತ್ತೊಂದೆಡೆ ಮಹಿಷ ದಸರಾ ಆಚರಣೆ ವಿರೋಧಿಸಿದ್ದ ಬಿಜೆಪಿ ಅಕ್ಟೋಬರ್ 13 ರಂದು ಬೆಳಿಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟ ಚಲೋಗೆ ಕರೆ ನೀಡಿತ್ತು. ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಇದೀಗ ಎರಡು ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.

ಇದನ್ನೂ ಓದಿ:Ramayana: ರಾಮನ ಪಾತ್ರಕ್ಕಾಗಿ ಮದ್ಯ, ಮಾಂಸಾಹಾರವನ್ನು ತ್ಯಜಿಸಲಿದ್ದಾರೆ ನಟ ರಣ್ಬೀರ್

Advertisement

ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಿಸಲಾಗಿದೆ. ಒಂದು ವೇಳೆ ಅನುಮತಿ ನೀಡಿದರೆ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ‌ಯಿರುವ ಕಾರಣ ಮಹಿಷ ದಸರಾ ಮತ್ತು ಚಾಮುಂಡಿ ಬೆಟ್ಟ ಚಲೋ ಎರಡಕ್ಕೂ ಬ್ರೇಕ್ ಹಾಕಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಎರಡೂ ಬಣಗಳಿಗೂ ಅನ್ವಯವಾಗುವಂತೆ ಪ್ರಕಟಣೆ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next