Advertisement

Mysore: ರಾಜಕೀಯ, ಕಾನೂನಾತ್ಮಕ ಹೋರಾಟ: ಸಿಎಂ ಸಿದ್ದರಾಮಯ್ಯ

02:15 AM Aug 11, 2024 | Team Udayavani |

ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ-ಜೆಡಿಎಸ್‌ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ರಾಜಕೀಯ ವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಹಾಗೂ ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾ ಪಾದಯಾತ್ರೆಯೊಂದಿಗೆ ಕಪ್ಪು ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಸಮಾವೇಶ ಮಾಡಲಾಗಿದೆ ಎಂದರು.

ಮಣಿಸಲು ತಂತ್ರ
ಬಿಜೆಪಿ ಮತ್ತು ಜೆಡಿಎಸ್‌ನವರು ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ರೆ. ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಚಾಮುಂಡಿಯ ದರ್ಶನ
ಮೈಸೂರು ನಗರದಲ್ಲಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ರು.

Advertisement

Udayavani is now on Telegram. Click here to join our channel and stay updated with the latest news.

Next