Advertisement
ಜಿಲ್ಲೆಯಲ್ಲಿ 39,822 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿದ್ದು, ಅವರಲ್ಲಿ 20,631 ಬಾಲಕರು ಹಾಗೂ 19,191 ಬಾಲಕಿಯರಿದ್ದು, ಇವರಿಗೆ ಒಟ್ಟು 139 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 849 ವಿದ್ಯಾರ್ಥಿಗಳು ಹೊರ ಜಿಲ್ಲೆಗೆ ಪರೀಕ್ಷಾ ಕೇಂದ್ರ ಬದಲು ಮಾಡಿಕೊಂಡಿದ್ದರೆ, 320 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಿಂದ ಮೈಸೂರಿಗೆ ಬದಲು ಮಾಡಿಕೊಂಡಿ ದ್ದಾರೆ. ನಗರದಲ್ಲಿ 46 ಪರೀಕ್ಷಾ ಕೇಂದ್ರಗಳಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ 93 ಕೇಂದ್ರಗಳನ್ನು ತೆರೆಯಲಾಗಿದೆ. ಇದಲ್ಲದೇ ಹೆಚ್ಚುವರಿಯಾಗಿ 12 ಬ್ಲಾಕ್ ಪರೀಕ್ಷಾ ಕೇಂದ್ರ ತೆರೆಯಲಾಗಿದೆ.
Related Articles
Advertisement
ಉಚಿತ ಸಾರಿಗೆ: ವಿದ್ಯಾರ್ಥಿಗಳನ್ನು ಅವರವರ ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಶಿಕ್ಷಣ ಇಲಾಖೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜತೆಗೆ ಒಪ್ಪಂದ ಮಾಡಿಕೊಂಡಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗಾಗಿ 54 ಬಸ್‌ಗಳನ್ನು ಬಳಸಿಕೊಳ್ಳ ಲಾಗುವುದು. ಎಲ್ಲಾ ವಿದ್ಯಾರ್ಥಿಗಳ ಮಾಹಿತಿಯೂ ಸಾರಿಗೆ ಸಂಸ್ಥೆಗೆ ನೀಡಿ ಉಚಿತವಾಗಿ ಪರೀಕ್ಷಾ ಕೇಂದ್ರ ಗಳಿಗೆ ಕರೆತರುವ ವ್ಯವಸ್ಥೆ ಮಾಡಲಾಗಿದೆ.
ಸಹಾಯವಾಣಿ: ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಗೊಂದಲ ನಿವಾರಣೆಗೆ ಈಗಾಗಲೇ ಎಲ್ಲಾ ತಾಲೂಕು ಮತ್ತು ನಗರ ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ವಿದ್ಯಾರ್ಥಿಗಳ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡುವ ವ್ಯವಸ್ಥೆ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ, ಮಾಸ್ಕ್, ಸ್ಯಾನಿಟೈ ಸರ್, ತಪಾಸಣೆ, ಆರೋಗ್ಯ ಸಿಬ್ಬಂದಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಪೋಷಕರಿಗೆ ಆತಂಕ ಬೇಡ, ಗೊಂದಲ ವಿಲ್ಲದೇ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ನಿರಾತಂಕ ವಾಗಿ ಪರೀಕ್ಷೆ ಬರೆಯಬಹುದು. ಒಂದು ವೇಳೆ ಸಮಸ್ಯೆ ಗಳಿದ್ದಲ್ಲಿ ಸಹಾಯವಾಣಿ ಅಥವಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬಹುದು. -ಪಾಂಡುರಂಗ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ