ಮೈಸೂರು: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಕೊಡ ಮಾಡುವ “ರಾಷ್ಟ್ರಕವಿ ಗೋವಿಂದ ಪೈ’ ಪ್ರಶಸ್ತಿಯನ್ನು ಮೈಸೂರಿನ ಪುರಾತತ್ವ ಶಾಸ್ತ್ರಜ್ಞ ಪ್ರೊ| ಎ.ವಿ. ನರಸಿಂಹ ಮೂರ್ತಿ ಅವರಿಗೆ ಪ್ರದಾನ ಮಾಡಲಾಯಿತು. ಟಿ. ವಿಮಲಾ ಎ. ಪೈ ಪ್ರಾಯೋಜಿತ ಈ ಪ್ರಶಸ್ತಿಯು 1 ಲಕ್ಷ ರೂ. ಬಹುಮಾನವನ್ನು ಒಳಗೊಂಡಿದೆ.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಹಿರಿಯ ಸಾಹಿತಿ ಬೆಳಗೋಡು ರಮೇಶ್ ಭಟ್ ಅಭಿನಂದನ ಭಾಷಣ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ಪ್ರೊ| ನರಸಿಂಹಮೂರ್ತಿ ಮಾತನಾಡಿ, ರಾಷ್ಟ್ರಕವಿ ಗೋವಿಂದ ಪೈಗಳ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸುವುದು ನನ್ನ ಭಾಗ್ಯ. ಪೈಗಳು ಭಾಷಾ ಪಂಡಿತರು ಎಂದರು. ಸಾಹಿತಿ ಡಾ| ಪಾದೇಕಲ್ಲು ವಿಷ್ಣು ಭಟ್ಟ ಅಧ್ಯಕ್ಷತೆ ವಹಿಸಿದ್ದರು.
ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ. ಚಂದ್ರಶೇಖರ್, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ ಶೆಟ್ಟಿ ಉಪಸ್ಥಿತರಿದ್ದರು.