Advertisement
ಪುಷ್ಪಲತಾ ಅವರ ಪರವಾಗಿ 48 ಮತಗಳು ಬಂದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ಸುನಂದಾ ಪಾಲನೇತ್ರ ಪರ 24 ಮತಗಳು ಬಂದವು. ಪುಷ್ಪಲತಾ 11 ನೇ ವಾರ್ಡ್‌ನ ಪಾಲಿಕೆ ಸದಸ್ಯೆ ಯಾಗಿದ್ದಾರೆ.
ಮೇಯರ್ ಸ್ಥಾನಕ್ಕಾಗಿ ಎರಡು ಪಕ್ಷದಲ್ಲಿ ಭಾರೀ ಪೈಪೋಟಿ ಏರ್ಪಟ್ಟಿತ್ತು.
Related Articles
Advertisement
ಸದಸ್ಯರ ಬಲಾಬಲಈ ಬಾರಿ ಪಾಲಿಕೆಯಲ್ಲಿ ಬಿಜೆಪಿ-22, ಕಾಂಗ್ರೆಸ್-19, ಜೆಡಿಎಸ್-18, ಬಿಎಸ್ಪಿ-1 ಹಾಗೂ 5 ಪಕ್ಷೇತರ ಸದಸ್ಯರಿದ್ದಾರೆ. ಇದರಲ್ಲಿ 18 ಸ್ಥಾನವನ್ನು ಪಡೆದಿರುವ ಜೆಡಿಎಸ್ ಮಿತ್ರ ಪಕ್ಷ ಬಿಸ್ಪಿ ಜತೆ ಸೇರಿ 19 ಸ್ಥಾನಗಳನ್ನು ಹೊಂದಿದೆ. ಜತೆಗೆ ಓರ್ವ ಶಾಸಕ ಹಾಗೂ ಮೂವರು ವಿಧಾನಪರಿಷತ್ ಸದಸ್ಯರ ಬೆಂಬಲದೊಂದಿಗೆ 23 ಸ್ಥಾನಗಳನ್ನು ಪಡೆದಿದೆ. ಇನ್ನೂ 19 ಸ್ಥಾನವನ್ನು ಗಳಿಸಿರುವ ಕಾಂಗ್ರೆಸ್ ಮೂವರು ಪಕ್ಷೇತರರು ಓರ್ವ ವಿಧಾನಪರಿಷತ್ ಸದಸ್ಯ ಹಾಗೂ ಓರ್ವ ಶಾಶಕರ ನೆರವಿನಿಂದ 24 ಚುನಾಯಿತ ಸದಸ್ಯರ ಬೆಂಬಲ ಹೊಂದಿದೆ. ಪಾಲಿಕೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ 22 ಸದಸ್ಯರ ಜತೆಗೆ ಇಬ್ಬರು ಶಾಸಕರು, ಓರ್ವ ಸಂಸದರ ಬೆಂಬಲದಿಂದ 25 ಸ್ಥಾನ ಹೊಂದಿದೆ. ನಗರ ಪಾಲಿಕೆ ಸದಸ್ಯರು ಹಾಗೂ ಚುನಾಯಿತ ಸದಸ್ಯರು ಸೇರಿ 74 ಮಂದಿ ಮತದಾನದ ಅರ್ಹತೆ ಪಡೆದಿದ್ದು, ಬಹುಮತಕ್ಕೆ 38 ಸದಸ್ಯರ ಬೆಂಬಲ ಅಗತ್ಯವಿತ್ತು.