Advertisement
ಸಿಎಂ ಕುಮಾರಸ್ವಾಮಿ ಚಾಲನೆ: ಆ.19 ಶುಕ್ರವಾರ ಮಧ್ಯಾಹ್ನ 2.30ರಿಂದ 3.16ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 3.40ರಿಂದ 4.10ಗಂಟೆ ವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಒಳಾವರಣದಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್ ಅರ್ಜುನ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಆರಂಭವಾಗಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ, ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ಬಳಿಕ 2ಗಂಟೆಗಳ ಕಾಲ ಮೈನವಿರೇಳಿಸುವ ಸಾಹಸ ಪ್ರದರ್ಶನ, ಬೈಕ್ ಸವಾರಿ, ಅಶ್ವಾರೋಹಿ ಪಡೆಗಳ ಸಾಹಸ ಪ್ರದರ್ಶನ ನಡೆಯಲಿದೆ. ಬಿಗಿ ಬಂದೋಬಸ್ತ್
ಜಂಬೂಸವಾರಿ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು 5284 ಜನ ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿದೆ. ಇದೇ ಮೊದಲ ಬಾರಿ ಮೊಬೈಲ್ ಕಮಾಂಡೋ ಭದ್ರತೆ ಒದಗಿಸಲಾಗಿದೆ.
Related Articles
42 ಮೆರವಣಿಗೆಯ ವೈಭವ ಹೆಚ್ಚಸಲಿರುವ ಸ್ತಬಟಛಿ ಚಿತ್ರಗಳು
12 ಅಂಬಾರಿ ಹೊತ್ತು ಸಾಗುವ ಅರ್ಜುನನನ್ನೊಳಗೊಂಡ ಗಜಪಡೆ
05 ಕಿ.ಮೀ. ದೂರದ ಬನ್ನಿ ಮಂಟಪಕ್ಕೆ ಮೆರವಣಿಗೆ
Advertisement
ಗಿರೀಶ್ ಹುಣಸೂರು