Advertisement

Mysore: ಆಸ್ತಿ ಘೋಷಣೆ ಮಾಡಿದ ಯದುವೀರ್: ಸ್ಥಿರಾಸ್ತಿ-ಚರಾಸ್ತಿ ಮೌಲ್ಯವೆಷ್ಟು?

04:45 PM Apr 01, 2024 | Team Udayavani |

ಮೈಸೂರು: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ‌ ಶ್ರೀವತ್ಸ ಜೊತೆ ಸೇರಿ ನಾಮಪತ್ರ ಸಲ್ಲಿಸಿದ್ದಾರೆ.

Advertisement

ಜ್ಯೋತಿಷಿಗಳ ಸೂಚನೆಯಂತೆ ಇಂದು ನಾಮಪತ್ರ ಸಲ್ಲಿಸಿದ ಯದುವೀರ್ ಅವರು ಏ.3 ರಂದು ಬೃಹತ್ ರ್ಯಾಲಿ ಮೂಲಕ ತೆರಳಿ ಮತ್ತೊಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಉಮೇದುವಾರಿಕೆ ಸಲ್ಲಿಕೆ ವೇಳೆ ಯದುವೀರ್ ಅವರು ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಯದುವೀರ್ ಬಳಿ ಕೈಯಲ್ಲಿ ಒಂದು ಲಕ್ಷ ನಗದು, ಎರಡು ಬ್ಯಾಂಕ್ ನ ಖಾತೆಗಳಲ್ಲಿ 23.55 ಲಕ್ಷ ಹಣ, ಒಂದು ಕೋಟಿ ಮೌಲ್ಯದ ವಿವಿಧ ಕಂಪನಿಗಳಲ್ಲಿ ಬಾಂಡ್ ಮತ್ತು ಶೇರುಗಳು, ನಾಲ್ಕು ಕೆಜಿ ಚಿನ್ನ, 20 ಕೆಜಿ ಬೆಳ್ಳಿ ಇದೆ ಎಂದು ಘೋಷಿಸಿದ್ದಾರೆ.

ಯದುವೀರ್ ಬಳಿ ಯಾವುದೇ ಕೃಷಿ ಭೂಮಿ ಹಾಗೂ ಸ್ವಂತ ಮನೆ ಹೊಂದಿಲ್ಲ. ಯಾವ ವಾಣಿಜ್ಯ ಕಟ್ಟಡಗಳಿಲ್ಲ. ಬ್ಯಾಂಕ್ ಗಳಲ್ಲಿ ಸಾಲ ಪಡೆದಿಲ್ಲ. ಯಾವುದೇ ರೀತಿಯ ಆಧಾಯ ತೆರಿಗೆ ಹಣ ಬಾಕಿ ಉಳಿಸಿಕೊಂಡಿಲ್ಲ. ಯದುವೀರ್ ಮೇಲೆ ಯಾವ ಪ್ರಕರಣಗಳು ದಾಖಲಾಗಿಲ್ಲ. ಒಟ್ಟು 4,99,59,303 ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಯದುವೀರ್ ಯಾವುದೇ ಸ್ಥಿರಾಸ್ತಿ ಇಲ್ಲ.

Advertisement

Udayavani is now on Telegram. Click here to join our channel and stay updated with the latest news.

Next