Advertisement

ಬೆಂಗಳೂರಿನ ಮನೆಯೊಂದರಲ್ಲಿ ಮಧ್ಯರಾತ್ರಿ ನಿಗೂಢ ಸ್ಫೋಟ: ಇಬ್ಬರಿಗೆ ಗಾಯ

08:22 AM Aug 16, 2021 | Team Udayavani |

ಬೆಂಗಳೂರು: ಬೆಂಗಳೂರಿನ ವಿಜಯನಗರದ ಹಂಪಿನಗರದ ಮನೆಯೊಂದರಲ್ಲಿ ಕಳೆದ ತಡರಾತ್ರಿ ನಿಗೂಢ ಸ್ಪೋಟವೊಂದು ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ.

Advertisement

ಹಂಪಿನಗರದಲ್ಲಿರುವ ಎರಡು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಈ ಸ್ಫೋಟವಾಗಿದ್ದು, ರಾತ್ರಿ 12.45ರ ಸುಮಾರಿಗೆ ಈ ಘಟನೆ ನಡೆದಿದೆ.

ಇದನ್ನೂ ಓದಿ:ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ : ದೇಶಾದ್ಯಂತ ನಡೆಯಲಿದೆ ಯಾತ್ರೆ

ಘಟನೆಯಲ್ಲಿ ಸೂರ್ಯನಾರಾಯಣ ಶೆಟ್ಟಿ, ಪತ್ನಿ ಪುಷ್ಪಾವತಮ್ಮ ಎಂಬರಿಗೆ ಗಾಯಗಳಾಗಿದೆ. ಇವರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಹಾಗೂ ಅಕ್ಕಪಕ್ಕದ ಮನೆ ಗಾಜುಗಳು ಪುಡಿ, ಪುಡಿಯಾಗಿದ್ದು ಗೋಡೆಗಳು ಬಿರುಕು ಬಿಟ್ಟಿವೆ.

ಅಕ್ಕಪಕ್ಕದ 5ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಯ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಕಟ್ ಆಗಿದೆ. ಸುಮಾರು 1 ಕಿ.ಮೀ.ವರೆಗೂ ಸ್ಫೋಟದ ಸದ್ದು ಕೇಳಿಸಿದೆ. ಸದ್ಯ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next