ನವದೆಹಲಿ: ದೆಹಲಿ ರೋಹಿಣಿ ಕೋರ್ಟ್ ನೊಳಗೆ ಸ್ಫೋಟ ಸಂಭವಿಸಿದ ಪರಿಣಾಮ ಒಬ್ಬರು ಗಾಯಗೊಂಡಿರುವ ಘಟನೆ ಗುರುವಾರ(ಡಿಸೆಂಬರ್ 09) ನಡೆದಿರುವುದಾಗಿ ಅಗ್ನಿಶಾಮಕ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: 13 ದೇವಸ್ಥಾನ/ದೈವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಚೋರರ ಬಂಧನ
ನ್ಯಾಯಾಲಯದ 102ನೇ ನಂಬರ್ ನ ಚೇಂಬರ್ ನಲ್ಲಿ ನಿಗೂಢ ಸ್ಫೋಟ ಸಂಭವಿಸಿರುವುದಾಗಿ ದೂರವಾಣಿ ಕರೆ ಬಂದಿತ್ತು. ಬಳಿಕ ಘಟನಾ ಸ್ಥಳಕ್ಕೆ ಏಳು ಅಗ್ನಿಶಾಮಕ ವಾಹನಗಳನ್ನು ರವಾನಿಸಲಾಗಿತ್ತು.
ಸ್ಫೋಟ ಲಘು ತೀವ್ರತೆಯನ್ನು ಹೊಂದಿದ್ದು, ಗಾಯಗೊಂಡ ವ್ಯಕ್ತಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟ ಪ್ರಕರಣದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಅಧಿಕಾರಿಗಳು ವಿವರ ನೀಡಿದ್ದಾರೆ.
ಘಟನೆಯ ನಂತರ ಕೋರ್ಟ್ ನಲ್ಲಿನ ಎಲ್ಲಾ ಕಲಾಪಗಳನ್ನು ಸ್ಥಗಿತಗೊಳಿಸಲಾಗಿತ್ತು ಎಂದು ವರದಿ ತಿಳಿಸಿದ್ದು, ಮೂಲಗಳ ಪ್ರಕಾರ ಲ್ಯಾಪ್ ಟಾಪ್ ನಿಂದಾಗಿ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ಬಗ್ಗೆ ಅಧಿಕಾರಿಗಳು ಇನ್ನಷ್ಟೇ ನಿಖರ ಮಾಹಿತಿ ನೀಡಬೇಕಾಗಿದೆ ಎಂದು ವರದಿ ತಿಳಿಸಿದೆ.