Advertisement
ಸುದ್ದಿಗಾರರೊಂದಿಗೆ ಮಾತನಾಡಿ ಸೆ. 5ರವರೆಗೂ ಪ್ರಾಧಿಕಾರದ ಸಭೆ ನಡೆಸದೆ ಯಥಾಸ್ಥಿತಿ ಕಾಪಾಡಿಕೊಂಡುವಂತೆ ಕೋರ್ಟ್ ಸೂಚಿಸಿದ್ದರೂ ಸಭೆ ಮಾಡಿರುವುದು ಕೋರ್ಟ್ ಆದೇಶದ ಉಲ್ಲಂಘನೆ ಮಾಡಿದಂತೆ. ಪ್ರಾಧಿಕಾರದ ರಚನೆಯಿಂದ ನಮ್ಮ ಮೂಲ ಧಾರ್ಮಿಕ ನಂಬಿಕೆ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತದೆ. ನಾವು ಧಾರ್ಮಿಕ ಹಕ್ಕುಗಳನ್ನು ಯಾರಿಗೂ ಕೊಟ್ಟಿಲ್ಲ. ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.
ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿ ಕಾರದ ಸಭೆಗೆ ರಾಜ ವಂಶಸ್ಥೆ ಪ್ರಮೋದಾ ದೇವಿ ಹಾಜರಾಗಲಿಲ್ಲ. ಸಭೆಯ ಹಿನ್ನೆಲೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಇ-ಮೇಲ್ ಮೂಲಕ ಪ್ರಮೋದಾದೇವಿ ಅವರಿಗೆ ಪತ್ರ ಬರೆದು ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದರು. ಮೇಲ್ ಮೂಲಕವೇ ಪ್ರತ್ಯುತ್ತರ ನೀಡಿದ ಪ್ರಮೋದಾದೇವಿ, ಸಭೆ ಕಾನೂನು ಬಾಹಿರವಾಗಿದೆ. ನ್ಯಾಯಾಲಯದ ವಿರುದ್ಧ ಸಭೆ ಸರಿಯಲ್ಲ. ಕಾನೂನು ಉಲ್ಲಂಘನೆ ಆಗಲಿದೆ ಎಂದ ಎಚ್ಚರಿಕೆ ನೀಡಿದ್ದಾರೆ. ಸೆ. 5ಕ್ಕೆ ನ್ಯಾಯಾಲಯದಲ್ಲಿ ಮುಂದುವರಿದ ವಿಚಾರಣೆ ಇದೆ. ಹೀಗಿರುವಾಗ ಸಭೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.