Advertisement
ದಸರಾ ಉಪಸಮಿತಿ ಸಭೆಯ ಬಳಿಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದರು. ಇಂದು 4 ನೇ ಬಾರಿ ದಸರಾ ಉಪ ಸಮಿತಿ ಸಭೆ ನಡೆದಿದೆ. ಆರಂಭದಲ್ಲಿ ಇದ್ದ ರಾಜ್ಯದ ಪರಿಸ್ಥಿತಿ ದಿನ ಕಳೆದಂತೆ ಬೇರೆಯಾಗುತ್ತಾ ಬಂದಿದೆ.ಮಳೆ ಪ್ರಮಾಣ 123 ವರ್ಷಗಳ ಬಳಿಕ ತುಂಬಾ ಕಡಿಮೆಯಾಗಿದೆ.ಜಲಾಶಯಗಳಲ್ಲಿ ನೀರಿನ ಪ್ರಮಾಣ ತುಂಬಾ ಕಡಿಮೆಯಿದೆ.ಕಾವೇರಿ ಕಣಿವೆ ಭಾಗದ ಜಲಾಶಯಗಳಲ್ಲಿ ಒಟ್ಟಾರೆಯಾಗಿ 49 ಟಿಎಂಸಿ ನೀರು ಲಭ್ಯವಿದೆ.ಈಗಾಗಲೇ 196 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.ಮುಂದಿನ ದಿನಗಳಲ್ಲಿ ಮತ್ತಷ್ಟು ತಾಲ್ಲೂಕುಗಳು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರ್ಪಡೆ ಆಗಲಿವೆ.ಹಾಗಾಗಿ ಈ ಬಾರಿಯ ದಸರಾ ಮಹೋತ್ಸವವನ್ನು ಸರಳವೂ ಅಲ್ಲದೇ, ಅದ್ದೂರಿಯಾಗಿಯೂ ಇಲ್ಲದೇ, ಸಾಂಪ್ರದಾಯಿಕವಾಗಿ ಆಚರಣೆ ಮಾಡಲಾಗುವುದು ಎಂದರು.
Related Articles
Advertisement
ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಬಿ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಶಿವರಾಜ್, ದಸರಾ ಉಪಸಮಿತಿಗಳ ಅಧಿಕಾರಿಗಳು ಉಪಸ್ಥಿತರಿದ್ದರು.