Advertisement

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

11:04 PM Apr 25, 2024 | Team Udayavani |

ಮೈಸೂರು: ಮಂಡ್ಯದಿಂದ ರಮ್ಮನಹಳ್ಳಿ ಮಾರ್ಗ ಮೂಲಕ‌ ಮೈಸೂರಿಗೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ನಗದನ್ನು ಎಸ್.ಎಸ್.ಟಿ ತಂಡ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

Advertisement

ಮತದಾನಕ್ಕೆ ಒಂದು ದಿನ ಬಾಕಿ ಇರುವಂತೆ ಗುರುವಾರ ರಾತ್ರಿ 8.30 ರ ಸಮಯದಲ್ಲಿ ಮಂಡ್ಯ – ಮೈಸೂರು ಸಂಪರ್ಕ ಕಲ್ಪಿಸುವ ಗ್ರಾಮೀಣ ಭಾಗದ ರಸ್ತೆಯಾದ ರಮ್ಮನಹಳ್ಳಿಯಲ್ಲಿ ಅನುಮಾನಸ್ಪದವಾಗಿ ಬಂದ ಕಾರನ್ನು ಚೆಕ್ ಪೋಸ್ಟ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ದಾಖಲೆ ಇಲ್ಲದ 89  ಲಕ್ಷ ರೂ.‌ನಗದು ಪತ್ತೆಯಾಗಿದೆ.

ಹಣ ಮುಟ್ಟುಗೋಲು ಹಾಕಿಕೊಂಡಿರುವ ಅಧಿಕಾರಿಗಳು ಜಿಲ್ಲಾ ಖಜಾನೆಗೆ ರವಾನಿಸಿದ್ದು, ಈ ಸಂಬಂಧ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ, ಹಣ ಯಾರದ್ದು ಎಂಬುದು ತಿಳಿದುಬಂದಿಲ್ಲ ಎಂದು ಮೈಸೂರು ತಾಲೂಕು ತಹಶೀಲ್ದಾರ್ ಮಹೇಶ್ ಕುಮಾರ್ ತಿಳಿಸಿದ್ದಾರೆ.ಕಾರ್ಯಾಚರಣೆ ಎಸ್.ಎಸ್.ಟಿ. ಮುಖ್ಯಸ್ಥ ನವೀನ್ ನೇತೃತ್ವದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next