Advertisement

ಮೈಸೂರು: ವಿದ್ಯಾರ್ಥಿನಿಗೆ ಮುಖ್ಯೋಪಾಧ್ಯಾಯನ ಕಿಸ್; ವಿಡಿಯೋ ವೈರಲ್

01:08 PM Jan 29, 2022 | Team Udayavani |

ಮೈಸೂರು: ವಿದ್ಯಾರ್ಥಿನಿಯೊಬ್ಬಳನ್ನು ಚುಂಬಿಸಿದ ಶಾಲೆಯ ಮುಖ್ಯೋಪಾಧ್ಯಾಯನ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ (ಪೋಕ್ಸೊ) ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿರುವ ಘಟನೆ ಹೆಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ.

Advertisement

ಶಾಲೆಯ ಮುಖ್ಯೋಪಾಧ್ಯಾಯರು ತಮ್ಮ ಚೇಂಬರ್‌ನಲ್ಲಿ ಬಾಲಕಿಗೆ ಮುತ್ತಿಕ್ಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶಿಕ್ಷಣ ಇಲಾಖೆ ಪ್ರಕರಣ ದಾಖಲಿಸಿದೆ.

ಆರೋಪಿ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಈ ವಿಡಿಯೋವನ್ನು ವಿದ್ಯಾರ್ಥಿಗಳು ಕಿಟಕಿಯ ಮೂಲಕ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.

ಮುಖ್ಯೋಪಾಧ್ಯಾಯರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಬಿಇಒ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next