Advertisement

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

07:04 PM Nov 20, 2024 | Team Udayavani |

ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಎಂಬ ವಿಎಫ್ಎಕ್ಸ್‌ ಸ್ಟುಡಿಯೋ ಆರಂಭವಾಗಿದೆ. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್‌ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌ ಈ ಸ್ಟುಡಿಯೋವನ್ನು ಉದ್ಘಾಟಿಸಿ ಶುಭ ಕೋರಿದರು.

Advertisement

ಕಮಲ್‌ ಈ ಸ್ಟುಡಿಯೋದ ಮಾಲೀಕರು. ವಿಡಿಯೋ ಕಾನ್‌ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ನಾನು ಕವಿ ಕೂಡ. ನನ್ನ ಎರಡು ಕವನ ಸಂಕಲನಗಳನ್ನು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್‌ ಕಲಾಂ ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಬಿಡುಗಡೆ ಮಾಡಿದ್ದಾರೆ. ಆನಂತರ ನಟನಾಗುವ ಆಸೆ ಮೂಡಿತ್ತು. ಇತ್ತೀಚೆಗೆ ತೆರೆಕಂಡ ದಿ ಸೂಟ್‌ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದೇನೆ. ಚಿತ್ರರಂಗಕ್ಕೆ ಅನುಕೂಲವಾಗು ವಂತಹ ಏನಾದರೊಂದು ಕೆಲಸ ಮಾಡಬೇಕೆಂದು ನನಗೆ ಅನಿಸುತ್ತಲೇ ಇತ್ತು. ಆ ಸಮಯಕ್ಕೆ ನನಗೆ 25ಕ್ಕೂ ಅಧಿಕ ವರ್ಷಗಳ ಅನುಭವವಿರುವ ಲೋಕೇಶ್‌ ಹಾಗೂ ಮಾರುತಿ ಎಂಬ ನುರಿತ ತಂತ್ರಜ್ಞರು ಸಿಕ್ಕರು. ನಾವೆಲ್ಲಾ ಸೇರಿ ಸ್ಟುಡಿಯೋವನ್ನು ಆರಂಭ ಮಾಡಿದ್ದೇವೆ. ನಿರ್ಮಾಪಕರಿಗೆ ಅನುಕೂಲವಾಗುವಂತಹ ಸ್ಟುಡಿಯೋ ಮಾಡಿರುವ ಖುಷಿಯಿದೆ ಎಂದರು ಮುಖ್ಯಸ್ಥ ಕಮಲ್.

Advertisement

Udayavani is now on Telegram. Click here to join our channel and stay updated with the latest news.

Next