Advertisement

ಎನ್. ವೆಂಕಟಾಚಲ ನಿಧನ : ಸಂತಾಪ ವ್ಯಕ್ತಪಡಿಸಿದ ಸಿ.ಎಂ. ಬಿ.ಎಸ್. ಯಡಿಯೂರಪ್ಪ

11:26 AM Oct 30, 2019 | Team Udayavani |

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ, ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿ, ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ಅವರು ಸೇವೆ ಸಲ್ಲಿಸಿದ್ದ ಅವರು 2001 ರಲ್ಲಿ ಕರ್ನಾಟಕ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಅವರು ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಿ, ಈ ವ್ಯವಸ್ಥೆಯ ಕುರಿತು ಜನರಲ್ಲಿ ನಂಬಿಕೆ ಮೂಡಿಸಿದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next