Advertisement

ಬಿಜೆಪಿ ಸರ್ಕಾರದಿಂದ ದ್ವೇಷ ರಾಜಕಾರಣ: ಮಾಜಿ ಕೃಷಿ ಸಚಿವ ಶಿವಶಂಕರರೆಡ್ಡಿ ಆಕ್ರೋಶ.

04:03 PM Sep 19, 2019 | keerthan |

ಚಿಕ್ಕಬಳ್ಳಾಪುರ: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದ್ವೇಷದ ರಾಜಕಾರಣ ಮಾಡುತ್ತಿದೆ, ಮೈತ್ರಿ ಸರ್ಕಾರದಲ್ಲಿ ಅಭಿವೃದ್ಧಿಗೆ ಬಂದ ಅನುದಾನವನ್ನು ಬಿಜೆಪಿ ಸರ್ಕಾರ ಹಿಂಪಡೆಯುತ್ತಿದೆಯೆಂದು ಮಾಜಿ ಕೃಷಿ ಸಚಿವ ಎನ್.ಹೆಚ್. ಶಿವಶಂಕರರೆಡ್ಡಿ ಕಿಡಿಕಾರಿದರು.

Advertisement

ಜಿಲ್ಲೆಯ ಗೌರಿಬಿದನೂರು ನಗರದ ಸೂರ್ಯ ಕಲ್ಯಾಣ ಮಂಟಪದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದಲ್ಲಿ ಲೋಕೋಪಯೋಗಿ, ಸಮಾಜ ಕಲ್ಯಾಣ, ನಗರಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಗೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಬಿಡುಗಡೆಗೊಂಡಿದ್ದ ಅನುದಾನವನ್ನು ಸಿಎಂ ಯಡಿಯೂರಪ್ಪ ವಾಪಸ್ಸು ಪಡೆಯುವ ಮೂಲಕ ವಿರೋದ ಪಕ್ಷಗಳ ಶಾಸಕರ ಕ್ಷೇತ್ರಗಳನ್ನು ಕಡೆಗಣಿಸುತ್ತಿದ್ದಾರೆಂದರು. ಬಿಜೆಪಿ ಸರ್ಕಾರ ನೆರೆ, ಬರ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ, ಕೇಂದ್ರದಿಂದ ಅಗತ್ಯ ಅನುದಾನ ತರುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಕ್ಷೇತ್ರಗಳ ಅಭಿವೃದ್ಧಿಗೆ ನೀಡಿದ ಹಣ ವಾಪಸ್ಸು ಪಡೆಯುತ್ತಿದ್ದಾರೆಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಮುಖಂಡರಾದ ಹನುಮಂತರೆಡ್ಡಿ, ಗೀತಾ, ಪ್ರಕಾಶರೆಡ್ಡಿ, ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next