Advertisement

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಗೆ ಕೋವಿಡ್ ದೃಢ

06:52 PM Oct 10, 2020 | sudhir |

ಬೆಂಗಳೂರು : ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ, ಈ ಕುರಿತು ರವಿ ಕುಮಾರ್ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

Advertisement

ಶನಿವಾರ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ಚಿಕಿತ್ಸೆಯಲ್ಲಿರುವ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ ಎಂದು ಹೇಳಿಕೊಂಡಿದ್ದಾರೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಚಿಕಿತ್ಸೆಗೆ ಒಳಪಡಬೇಕೆಂದು ವಿನಂತಿಯನ್ನು ಮಾಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೆ ಏರಿಕೆಯಾಗುತ್ತಿದ್ದು ಸಾರ್ವಜನಿಕರಲ್ಲೂ ಆತಂಕ ಮನೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next