Advertisement

ಎನ್. ವೆಂಕಟಾಚಲ ನಿಧನ: ಸಂತಾಪ ಸೂಚಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

11:41 AM Oct 30, 2019 | Mithun PG |

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

ಲೋಕಾಯುಕ್ತಕ್ಕೆ ಅನ್ವರ್ಥನಾಮ ಎಂಬಂತಿದ್ದ, ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲ ಅವರ ನಿಧನ ಅತೀವ ನೋವುಂಟು ಮಾಡಿದೆ. ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವದ ಅವರು ಲೋಕಾಯುಕ್ತಕ್ಕೆ ಕಾಯಕಲ್ಪ ನೀಡಿದವರು. ಅವರ ಅಗಲಿಕೆ ಸಮಾಜದ ಬಹುದೊಡ್ಡ ನಷ್ಟ.

ವೆಂಕಟಾಚಲ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದಯಪಾಲಿಸಲಿ ಎಂದು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next