Advertisement

ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಕಾಂಗ್ರೆಸ್ ನತ್ತ?

11:02 PM Mar 27, 2023 | Team Udayavani |

ಬೆಂಗಳೂರು: ಕೂಡ್ಲಿಗಿ ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ನಾಳೆ ಶಾಸಕ ಸ್ಥಾನಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

Advertisement

ಸೋಮವಾರ ನಗರದ ಹೊರವಲಯದಲ್ಲಿ ನಡೆಯುತ್ತಿದ್ದ ಸ್ಕ್ರೀನಿಂಗ್ ಸಮಿತಿ ಸಭೆ ವೇಳೆ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಗೋಪಾಲ ಕೃಷ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗೋಪಾಲ ಕೃಷ್ಣ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಭರವಸೆ ಸಿಕ್ಕಿದೆ ಎಂದು ತಿಳಿದು ಬಂದಿದೆ.

ಈ ನಡುವೆ ಜೆಡಿಎಸ್ ಶಾಸಕರಾದ ಅರಸೀಕೆರೆ ಶಿವಲಿಂಗೇಗೌಡ ಹಾಗೂ ಅರಕಲಗೂಡು ಎ. ಟಿ. ರಾಮಸ್ವಾಮಿ ಸಹ ಒಂದೆರಡು ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next