ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಜ.16ರಂದು ಕಾಂಗ್ರೆಸ್ ಮಹಿಳಾ ಘಟಕ ಹಮ್ಮಿಕೊಂಡಿರುವ “ನಾ ನಾಯಕಿ” ಸಮಾವೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಪ್ರಿಯಾಂಕ ಗಾಂಧಿ ಅವರು ಭಾಗವಹಿಸಲಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂದು ಬೆಳಗ್ಗೆ 11ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದಾರೆ ರಾಜ್ಯದ ವಿವಿಧ ಮೂಲೆಗಳಿಂದ ಮಹಿಳಾ ನಾಯಕಿಯರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಪಕ್ಷ ಮಹಿಳಾ ನಾ ನಾಯಕಿ ಸಮಾವೇಶ ಮಾಡುವ ಅವಕಾಶ ನೀಡಿದೆ. ಮಹಿಳೆಯರಿಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಮಾಡಬೇಕು ಎಂದು ಪಕ್ಷದ ಮಹಿಳಾ ಘಟಕದ ವತಿಯಿಂದ ಪ್ರಿಯಾಂಕ ಗಾಂಧಿಯವರಿಗೆ ಒಕ್ಕೊರಲಿನ ಒತ್ತಾಯ ಮಾಡಲಾಗುವುದು. ರಾಜ್ಯದ 74 ವಿಧಾನ ಸಭಾಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್‌ಗಳಿ ಮಹಿಳೆಯರು ಬಯಸಿದ್ದಾರೆ. 30 ಮಹಿಳೆಯರು ಟಿಕೆಟ್ ಬೇಡಿಕೆ ಇಟ್ಟಿದ್ದಾರೆ ಗೆಲ್ಲುವುದೇ ಮಾನದಂಡವಾಗಿದೆ ಎಂದು ಹೇಳಿದರು.
ಮಹಿಳಾ ಮೀಸಲಾತಿಯನ್ನ ಸರ್ಕಾರ ಜಾರಿಗೆ ತರಬೇಕು. ಮಸೂದೆ ಜಾರಿಗೆ ಬಂದರೆ ಮಹಿಳೆಯರಿಗೆ ಅವಕಾಶ ಸಿಗಲಿದೆ. ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಜಾರಿಗೆ ಮುಂದಾಬೇಕು.ಹಾಗಾದಾಗ ಮಾತ್ರ ಹೆಣ್ಣುಮಕ್ಕಳಿಗೆ ಕಡ್ಡಾಯ ಟಿಕೆಟ್ ಸಿಗಲಿದೆ ಎಂದರು.
ಮಾಜಿ ಸಚಿವೆ ಉಮಾಶ್ರೀ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು 109 ಮಹಿಳಾ ಅರ್ಜಿಗಳು ಬಂದಿವೆ. ಅರ್ಜಿ ಸಲ್ಲಿಸಿದವರೆಲ್ಲರೂ ಸಮರ್ಥರಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಮಹಿಳಾ ಮಣಿಗಳಿಗೆ ಟೀಕೆಟ್ ನೀಡುವತ್ತ ಒಲವು ತೋರಬೇಕೆಂದು ಮನವಿ ಮಾಡಲಾಗುವುದು ಎಂದು ಹೇಳಿದರು.
ಪ್ರತಿಯೊಂದು ಗ್ರಾಮಪಂಚಾಯ್ತಿ, ವಾರ್ಡ್ ಮಟ್ಟದಿಂದಲು ಹೆಣ್ಣು ಮಕ್ಕಳು ಬರಬೇಕು ಎಂಬುದು ಪಕ್ಷದ ಆಸೆ ಆಗಿದೆ. ಆ ಹಿನ್ನೆಲೆಯಲ್ಲಿ ಈ ಸಮಾವೇಶದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ನಿರೀಕ್ಷೆಯಿದೆ ಎಂದರು. ಮಾಜಿ ಸಚಿವೆ ರಾಣಿ ಸತೀಶ್ ಸೇರಿದಂತೆ ಮತ್ತಿತತರು ಉಪಸ್ಥಿತರಿದ್ದರು.