ಲಾಸ್ ಏಂಜಲೀಸ್: ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.
Advertisement
ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನದ ಹಾಡನ್ನು ಚಂದ್ರಬೋಸ್ ಅವರು ಬರೆದಿದ್ದಾರೆ.
ಈ ಹಾಡಿಗೆ ಈಗಾಗಲೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್, ಗೋಲ್ಡನ್ ಗ್ಲೋಬ್, ಹಾಲಿವುಡ್ ಮ್ಯೂಸಿಕ್ ಇನ್ ಮಿಡಿಯಾ ಅವಾರ್ಡ್ಸ್ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.