Advertisement

ಸೈನ್ಸ್‌ ಮತ್ತು ಸೆನ್ಸ್‌ ನಡುವೆ ‘ನಾಚಿ’: ತಾತ, ಮೊಮ್ಮಗಳ ಕಥೆ

04:03 PM Jan 23, 2022 | Team Udayavani |

“ನಾಚಿ’ ಎಂಬ ಸಿನಿಮಾವೊಂದು ಸದ್ದಿಲ್ಲದೇ ಮೊದಲ ಹಂತದ ಚಿತ್ರೀಕರಣ ಪೂರೈಸಿದೆ. “ಸಚಿತ್‌ ಫಿಲಂಸ್‌’ ಲಾಂಛನದಲ್ಲಿ ವೆಂಕಟ ಗೌಡ ಮತ್ತು ಮೀನಾ ವೆಂಕಟ್‌ ಗೌಡ ನಿರ್ಮಾಣ, ಶಶಾಂಕ್‌ ರಾಜ್‌ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗುಯತ್ತಿದೆ.

Advertisement

ಪವನ್‌ ಶೌರ್ಯ ಈ ಚಿತ್ರದ ನಾಯಕರಾದರೆ, ಮೌರ್ಯಾನಿ ನಾಯಕಿ. ಚಿತ್ರದ ಬಗ್ಗೆ ಮಾತನಾಡುವ ಶಶಾಂಕ್‌ ರಾಜ್‌, ಎಲ್ಲ ಅಂದು ಕೊಂಡಂತೇ ಆಗಿದ್ದಿದ್ದರೆ ಅಕ್ಟೋಬರ್‌ 29ರಂದು ಮುಹೂರ್ತ ನಡೆಸಿ ಚಿತ್ರೀಕರಣಕ್ಕೆ ತೆರಳುವ ಯೋಜನೆ ಇತ್ತು.  ಆದರೆ, ಪುನೀತ್‌ ರಾಜ್‌ ಕುಮಾರ್‌ ಅವರ ಅಗಲಿಕೆಯ ಕಾರಣಕ್ಕೆ ಅದು ಸಾಧ್ಯವಾಗಲಿಲ್ಲ. ಸರಳವಾಗಿ ಪೂಜೆ ನೆರವೇರಿಸಿಕೊಂಡು ಚಿತ್ರೀಕರಣ ಆರಂಭಿಸಲಾಗಿತ್ತು. ಸದ್ಯ ನಾಚಿ ಚಿತ್ರ 35 ದಿನಗಳ ಚಿತ್ರೀಕರಣ ನಡೆಸಿದೆ. ಇನ್ನೂ 25 ದಿನ ಶೂಟಿಂಗ್‌ ಬಾಕಿ ಇದೆ.

ಇದನ್ನೂ ಓದಿ:ಸುಭಾಷ್‌ ಚಂದ್ರ ಬೋಸ್‌.. ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿ ಶಕ್ತಿ

“ಇದು ತಾತ ಮೊಮ್ಮಗಳ ಸುತ್ತ ಪ್ರಧಾನವಾಗಿ ಬೆಸೆದುಕೊಂಡ ಕತೆ. ನಚಿತಾ ಎನ್ನುವುದು ಆಕೆಯ ಹೆಸರು. ಎಲ್ಲರೂ ಪ್ರೀತಿಯಿಂದ ನಾಚಿ ಎಂದು ಕರೆಯುತ್ತಿರುತ್ತಾರೆ. ಪುರಾತತ್ವ ವಿಭಾಗದ ಅಂತಿಮ ವರ್ಷದಲ್ಲಿ ಓದುತ್ತಿರುತ್ತಾಳೆ. ಅದೊಮ್ಮೆ ಮಲೆನಾಡಿನ ಪ್ರದೇಶವೊಂದರಲ್ಲಿ ಪ್ರಾಚ್ಯವಸ್ತುಗಳ ಸಂಶೋಧನೆಗೆಂದು ಹೋದಾಗ ಅದು ತನ್ನದೇ ಪೂರ್ವಜರ ಮನೆ ಎಂದು ಗೊತ್ತಾಗುತ್ತದೆ. ಇದರ ಜೊತೆ ನಿಧಿಯ ಕತೆ ಕೂಡಾ ತೆರೆದುಕೊಳ್ಳುತ್ತದೆ. ಇತಿಹಾಸ, ವಿಜ್ಞಾನ, ಲವ್‌, ಕಾಮಿಡಿ, ಥ್ರಿಲ್ಲರ್‌ ಅಂಶಗಳೊಂದಿಗೆ ಆಕ್ಷನ್‌ ಕೂಡಾ ಕತೆಯಲ್ಲಿ ಬೆಸೆದುಕೊಂಡಿದೆ. ಸೈನ್ಸ್‌ ಮತ್ತು ಸೆನ್ಸ್‌ ನಡುವೆ ನಡೆಯುವ ಕಥೆ ಇದಾಗಿದೆ’ ಎಂದು ವಿವರ ನೀಡುತ್ತದೆ ತಂಡ.

ಮಲೆನಾಡಿನ ಸುಂದರ ತಾಣಗಳಲ್ಲಿ ನಾಚಿ ಚಿತ್ರೀಕರಣ ನಡೆಸಲಾಗಿದೆ. ಯಕ್ಷಗಾನ, ಭೂತ ಕೋಲಗಳ ದೃಶ್ಯಗಳನ್ನು ನೈಜವಾಗಿ ಸೆರೆ ಹಿಡಿಯಲಾಗಿದೆಯಂತೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next