Advertisement

ಬಿಜೆಪಿ ಅಧ್ಯಕ್ಷರಾಗಿ ನಡ್ಡಾ ನೇಮಕ?

02:22 AM May 31, 2019 | Team Udayavani |

ನವದೆಹಲಿ: ಗುಜರಾತ್‌ನ ಗಾಂಧಿನಗರ ಕ್ಷೇತ್ರದಿಂದ ಗೆಲುವು ಸಾಧಿಸಿ ಲೋಕಸಭೆಗೆ ಕಾಲಿಟ್ಟು ಸಚಿವ ಹುದ್ದೆಗೇರಿದ ಅಮಿತ್‌ ಶಾ ಈಗ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಮಾಜಿ ಸಚಿವ ಜೆ.ಪಿ.ನಡ್ಡಾಗೆ ಬಿಟ್ಟುಕೊಡಲಿದ್ದಾರೆ ಎನ್ನಲಾಗಿದೆ.

Advertisement

ಮೋದಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ನಡ್ಡಾ, ಶಾ ಸಹಕಾರದೊಂದಿಗೆ ಪಕ್ಷವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬಿಜೆಪಿಗೆ ಅತ್ಯಂತ ಮಹತ್ವದ ಮೂರು ರಾಜ್ಯಗಳ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರ, ಜಾರ್ಖಂಡ ಮತ್ತು ಹರಿಯಾಣ ಚುನಾವಣೆಯನ್ನು ನಡ್ಡಾ ನಿರ್ವಹಿಸುವ ಸಾಧ್ಯತೆಯಿದೆ. ಹೀಗಾಗಿಯೇ, ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ. ಶೀಘ್ರದಲ್ಲಿಯೇ ನಡೆಯಲಿರುವ ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ನೇತೃತ್ವವನ್ನೂ ನಡ್ಡಾ ವಹಿಸಬೇಕಿರುತ್ತದೆ. ಸದ್ಯ ರಾಜ್ಯಸಭೆ ಸದಸ್ಯರಾಗಿರುವ ನಡ್ಡಾ ಬ್ರಾಹ್ಮಣ ಸಮುದಾಯದವರು. ಲೋಕಸಭೆ ಚುನಾವಣೆಯಲ್ಲಿ ಇವರು ಉತ್ತರ ಪ್ರದೇಶದ ಚುನಾವಣೆ ಉಸ್ತುವಾರಿ ಹೊತ್ತಿದ್ದರು. 80 ಕ್ಷೇತ್ರಗಳ ಪೈಕಿ 62 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಪಟನಾದ ಸೇಂಟ್ ಕ್ಸೇವಿಯರ್‌ ಸ್ಕೂಲ್ನಲ್ಲಿ ಓದಿದ ಇವರು ಹಿಮಾಚಲ ಪ್ರದೇಶ ವಿವಿಯಲ್ಲಿ ಎಲ್ಎಲ್ಬಿ ಶಿಕ್ಷಣ ಪಡೆದಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಇವರು ಮೂರು ಬಾರಿ ಶಾಸಕರೂ ಆಗಿದ್ದರು. 2014 ರಲ್ಲಿ ಮೊದಲ ಬಾರಿಗೆ ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬಲಪಡಿಸುವುದು ನಡ್ಡಾ ಅವರ ಪ್ರಮುಖ ಆದ್ಯತೆ ಎಂದು ಹೇಳಲಾಗಿದೆ. ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಮತ್ತು ಎಸ್‌ಪಿಯ ಕಠಿಣ ಪೈಪೋಟಿಯ ಮಧ್ಯೆಯೂ ಬಿಜೆಪಿಗೆ 62 ಕ್ಷೇತ್ರಗಳಲ್ಲಿ ಗೆಲುವು ತಂದುಕೊಡುವಲ್ಲಿ ನಡ್ಡಾ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next