Advertisement

ನಡ್ಡಾ ಬಿಜೆಪಿ ಕಾರ್ಯಾಧ್ಯಕ್ಷ

01:29 AM Jun 18, 2019 | Team Udayavani |

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸೋಮವಾರ ಸಂಜೆ ನವದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Advertisement

ಕೆಲವೇ ತಿಂಗಳಲ್ಲಿ ಮಹಾರಾಷ್ಟ್ರ, ಹರ್ಯಾಣ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆಗಳು ನಡೆಯುವುದರಿಂದ ಅಲ್ಲಿಯವರೆಗೂ ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ಅಮಿತ್‌ ಶಾ ಅವರನ್ನೇ ಮುಂದುವರಿಸಲು ಸಂಸದೀಯ ಮಂಡಳಿ ತೀರ್ಮಾನಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ”ಸದ್ಯದ ಮಟ್ಟಿಗೆ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಶಾ ಅವರೇ ಮುಂದುವರಿಯಲಿದ್ದಾರೆ. ಪಕ್ಷದ ಕಾರ್ಯಾಧ್ಯಕ್ಷರ ಸ್ಥಾನಕ್ಕೆ ನಡ್ಡಾ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರು ಆರಿಸಿದ್ದಾರೆ” ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next