Advertisement

ನಾಡೋಜ ಕೋ.ಚೆನ್ನಬಸಪ್ಪ ಇನ್ನಿಲ್ಲ

12:49 AM Feb 24, 2019 | |

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ನಾಡೋಜ ಕೋ.ಚೆನ್ನಬಸಪ್ಪ (98)ಇನ್ನಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ನ್ಯಾಯಾಧೀಶ ಕೋ.ಚೆನ್ನಬಸಪ್ಪ ಶನಿವಾರ ಬೆಳಗ್ಗೆ 7.30ರ ವೇಳೆ ನಗರದ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದು ಐವರು ಮಕ್ಕಳು ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

Advertisement

ಚೆನ್ನಬಸಪ್ಪ ಅವರ ಪಾರ್ಥಿವ ಶರೀರವನ್ನು ರಾಜಾಜಿನಗರದ ಅವರ ನಿವಾಸದಲ್ಲಿ ಇರಿಸಲಾ ಗಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌ ಸೇರಿದಂತೆ ಕನ್ನಡ ಸಾಹಿತ್ಯ ಲೋಕದ ಹಿರಿಯ ಗಣ್ಯರು ಅಂತಿಮ ದರ್ಶನ ಪಡೆದರು.ಭಾನುವಾರ ಬೆಳಗ್ಗೆ 12 ಗಂಟೆಗೆ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಚೆನ್ನಬಸಪ್ಪ ಅವರ ಪುತ್ರ ಗುರುದೇವ್‌ ತಿಳಿಸಿದ್ದಾರೆ.

1922 ಫೆ.27ರಂದು ಬಳ್ಳಾರಿ ಜಿಲ್ಲೆ ಆಲೂರಿನ ಸಮೀಪದ ಕಾನಮಡುಗು ಎಂಬಲ್ಲಿ ಜನಿಸಿದ ಇವರು, ಕಾನಮಡುಗು ಮತ್ತು ಬಳ್ಳಾರಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಅನಂತಪುರದಲ್ಲಿ ಕಾಲೇಜು ವ್ಯಾಸಂಗ ಪೂರೈಸಿದ್ದರು. ವಿದ್ಯಾರ್ಥಿ ದೆಸೆಯಲ್ಲಿ¨ªಾಗಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿ,”ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳವಳಿಯಲ್ಲಿ ವಿದ್ಯಾರ್ಥಿ ಮುಖಂಡರಾಗಿ ಭಾಗವಹಿಸಿ ಸೆರೆವಾಸ ಅನುಭವಿಸಿದರು.

 ಸೆರೆಮನೆಯಿಂದ ಹೊರಬಂದ ನಂತರದಲ್ಲಿ ಬಿ.ಎ ಪದವಿ ಪಡೆದರು. ನಂತರ ಕಾನೂನು ,ಚರಿತ್ರೆ ಮತ್ತು ರಾಜ್ಯ ಶಾಸ್ತ್ರಗಳಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1946ರಲ್ಲಿ ಮುಂಬೈ ನ್ಯಾಯಾಲಯದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸಿದ ಚೆನ್ನಬಸಪ್ಪ ಅವರು,1965ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡರು. ನಿವೃತ್ತಿ ನಂತರ ಮತ್ತೆ ವಕೀಲಿ ವೃತ್ತಿ ನಡೆಸುವುದರ ಜತೆಗೆ ಹಲವಾರು ಕಾರ್ಮಿಕ ಸಂಘಟನೆಗಳ ಹೋರಾಟಗಳಲ್ಲಿ ಭಾಗವಹಿಸಿದ್ದರು.

“ಸ್ವಾತಂತ್ರ್ಯ ಮಹೋತ್ಸವ, “ಪ್ರಾಣಪಕ್ಷಿ, “ಜೀವ ತೀರ್ಥ, “ಗಡಿಪಾರು,”ನಮ್ಮೂರ ದೀಪ, “ಗಾಯಕನಿಲ್ಲದ ಸಂಗೀತ , “ಹಿಂದಿರುಗಿ ಬರಲಿಲ್ಲ,”ನೊಗದ ನೇಣು, “ರಕ್ತತರ್ಪಣ,”ಬೇಡಿ ಕಳಚಿತು -ದೇಶ ಒಡೆಯಿತು, ಸೇರಿದಂತೆ ಎಂಭತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದರು.”ಶ್ರೀರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ, “ದೃಢಪ್ರತಿಜ್ಞೆ’, “ಕುವೆಂಪು ವೈಚಾರಿಕತೆ ವಿಮಶಾì ಗ್ರಂಥ ರಚಿಸಿ ಸಾಹಿತ್ಯ ಲೋಕದಲ್ಲಿ ಹೆಸರುವಾಸಿಯಾಗಿದರು.

Advertisement

ಸಾಹಿತ್ಯ ಕೃಷಿಗಾಗಿ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಉಗ್ರಾಣ ಪ್ರಶಸ್ತಿ, ಸ.ಸ.ಮಾಳವಾಡ ಪ್ರಶಸ್ತಿ, ಚಿಂತನ ಶ್ರೀಪ್ರಶಸ್ತಿ, ಸಂ.ಶಿ.ಭೂಸನೂರ ಮಠ ಪ್ರಶಸ್ತಿ, ಕನ್ನಡಶ್ರೀ ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ವಿಜಯಪುರ ದಲ್ಲಿ ನಡೆದ 79ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕೋ.ಚೆನ್ನಬಸಪ್ಪ ನಿಧನಕ್ಕೆ ಕನ್ನಡ ಸಾಹಿತ್ಯ ಲೋಕ ಕಂಬನಿ ಮಿಡಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next