Advertisement

ನಾಗಾಲ್ಯಾಂಡ್ ಚುನಾವಣೆ; 28 ಕೋಟಿ ರೂ.ಗೂ ಹೆಚ್ಚು ನಿಷೇಧಿತ ವಸ್ತುಗಳ ವಶ

05:52 PM Feb 04, 2023 | Team Udayavani |

ಕೊಹಿಮಾ : ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಅಕ್ರಮ ಚಟುವಟಿಗಳೂ ತೀವ್ರ ಗೊಂಡಿದ್ದು, ಇದಕ್ಕೆ ಸಾಕ್ಷಿಯಾಗಿ 28 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಫೆಬ್ರವರಿ 3 ರವರೆಗೆ ವಿವಿಧ ಜಾರಿ ಏಜೆನ್ಸಿಗಳಿಂದ ನಗದು, ಮದ್ಯ, ಡ್ರಗ್ಸ್ ಮತ್ತು ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಾಗಾಲ್ಯಾಂಡ್ ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

ನಾಗಾಲ್ಯಾಂಡ್‌ನಲ್ಲಿ ಫೆಬ್ರವರಿ 27 ರಂದು ಮತದಾನ ನಡೆಯಲಿದ್ದು, ಮಾರ್ಚ್ 2 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 7 ಕೊನೆಯ ದಿನವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next