Advertisement
ಅವರು ಗುರುವಾರ ನಗರದ ದೀನ ದಯಾಳ್ ಸಭಾಭವನದಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರ್ತನೆ ದೇಶ ವಿರೋಧಿಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ರಾಹುಲ್ ಗಾಂಧಿ ದೇಶದ ಒಳಗೆ ಮತ್ತು ಹೊರಗಡೆ ಅಖಂಡತೆಯನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದ್ದಾರೆ. ದೇಶದ ಒಳಗೆ ಮತೀಯವಾಧಿ ವಿಭಜಕ, ನಕ್ಸಲ್ ವಾದಿ ಧೋರಣೆ ಹಾಗೂ ವಿದೇಶದಲ್ಲಿ ಭಾರತದ ಕುರಿತಾಗಿ ನಕಾರಾತ್ಮಕ ಧೋರಣೆ ಬೆಳೆಯುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅಮೆರಿಕಾ ಯುನಿವರ್ಸಿಟಿಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷ ಮೀಸಲಾತಿ ಸ್ಥಗಿತಗೊಳಿಸುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಇದೇ ಮೊದಲಲ್ಲ ಇಂತಹ ಹೇಳಿಕೆ ನೀಡಿರುವುದು. ಬಹಳಷ್ಟು ಬಾರಿ ಹೇಳಿದೆ. ರಾಹುಲ್ ಗಾಂಧಿ ಹೇಳಿರುವ ಮೀಸಲಾತಿ ವಿರೋಧಿ ಹೇಳಿಕೆಯನ್ನು ಖಂಡಿಸಿ, ರಾಷ್ಟ್ರ ವ್ಯಾಪಿ ಹೋರಾಟಕ್ಕೆ ಮುಂದಾಗಿದ್ದೇವೆ. ಭಾರತದ ಚುನಾವಣಾ ವ್ಯವಸ್ಥೆ ಸರಿಯಿಲ್ಲ ಎಂದು ವಿದೇಶಿ ನೆಲದಲ್ಲಿ ಹೇಳುತ್ತಾರೆ. ಇದರಿಂದ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು.
ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡಿ, ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿ ಮಹಾತ್ಮಾ ಗಾಂಧಿ ಕಂಡ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡಿದ್ದಾರೆ ಎಂದರು.
ಜಿಲ್ಲೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಹೊಸ ಸದಸ್ಯರ ನೋಂದಣಿ ಯಶಸ್ವಿಯಾಗಿ ನಡೆಯುತ್ತಿದೆ. ಹಳಿಯಾಳದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧ್ಯಕ್ಷರು ಪಕ್ಷದ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದಾರೆ. ಕ್ಯಾದಗಿಯಲ್ಲಿ ನಡೆದ ಘಟನೆ ನನ್ನ ಗಮನಕ್ಕಿಲ್ಲ. ಜಿಲ್ಲಾಧ್ಯಕ್ಷರು ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು. ಈ ವೇಳೆ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ನಗರ ಮಂಡಳಾಧ್ಯಕ್ಷ ಆನಂದ ಸಾಲೇರ, ಎಸ್ .ಟಿ ಮೋರ್ಚಾ ಅಧ್ಯಕ್ಷ ಶ್ರೀಕಾಂತ ಬಳ್ಳಾರಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ, ಸಾಮಾಜಿಕ ಜಾಲತಾಣದ ಸಂಚಾಲಕ ರವಿಕುಮಾರ ಶೆಟ್ಟಿ ಇದ್ದರು.