Advertisement

ನಾಗಮಂಗಲ: ನಿಂತಿದ್ದ ಲಾರಿಗೆ ಬಸ್‌ ಢಿಕ್ಕಿ;20 ಮಂದಿಗೆ ಗಂಭೀರ ಗಾಯ 

10:26 AM Apr 11, 2017 | Team Udayavani |

ನಾಗಮಂಗಲ: ಇಲ್ಲಿನ ಕದಬಹಳ್ಳಿ  ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಿಂತಿದ್ದ ಲಾರಿಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಢಿಕ್ಕಿಯಾಗಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಮಂಗಳವಾರ ನಸುಕಿನ ವೇಳೆ ಸಂಭವಿಸಿದೆ. 

Advertisement

ಗಾಯಾಳುಗಳನ್ನು ಬೆಳ್ಳೂರು ಕ್ರಾಸ್‌ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ 20 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next