Advertisement
ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ಹಿಂದೆ ಹೊರಗಿನ ಶಕ್ತಿ ಕೆಲಸ ಮಾಡಿರುವ ಅನುಮಾನವಿತ್ತು. ಅದರಂತೆ ಕೇರಳದವರ ಹೆಸರು ಬಹಿರಂಗವಾಗುವ ಮೂಲಕ ಇದು ಸಾಬೀತಾಗಿದೆ. ಗಲಾಟೆಗಿಂತ ಹೆಚ್ಚಾಗಿ ಭಯದ ವಾತಾವರಣ ನಿರ್ಮಿಸಬೇಕು, ಆತಂಕ ಸೃಷ್ಟಿ ಮಾಡಬೇಕು, ಗಲಭೆ ನಡೆಸಿ ನಷ್ಟವುಂಟು ಮಾಡ ಬೇಕೆಂ ಬುದು ಗಲಭೆಯ ಉದ್ದೇಶವಾಗಿದೆ ಎಂದರು.
ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೇನ್ ಬಾವುಟ ಹಾರಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಲೆನಾಡು ಭಯೋತ್ಪಾದಕ ಕೃತ್ಯವೆಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸಲಾಗಿತ್ತು. ಇದು ದೇಶಕ್ಕೆ ಅಪಾಯಕಾರಿಯಾಗಿದ್ದು ಇದರ ಹಿಂದಿನ ಜಾಲವನ್ನು ಪತ್ತೆ ಹಚ್ಚಬೇಕಿದೆ ಎಂದರು.