Advertisement

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ

06:10 PM Sep 12, 2024 | Team Udayavani |

ಹೊಸದಿಲ್ಲಿ: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ, ಗಲಭೆ ನಡೆಯಲು ಕಾಂಗ್ರೆಸ್‌ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ ಎಂದು ಕೇಂದ್ರ ಸಚಿವ ಹಾಗೂ ಮಂಡ್ಯ ಸಂಸದ  ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

Advertisement

ಕಾಂಗ್ರೆಸ್‌ ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯ ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರ ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಎಸೆದು ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಹೇಳಿದರು.

ಸಾರ್ವಜನಿಕರು ಶಾಂತಿ ಕಾಪಾಡಿ:
ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಎಚ್ಚರಿಸಿದರು.

ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ:
ಎಚ್‌.ಡಿ.ಕುಮಾರಸ್ವಾಮಿ ಈ ಗಲಭೆಯಲ್ಲಿ ರಾಜಕಾರಣ ಮಾಡುವುದು ಬೇಡ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ “ನಾಗಮಂಗಲ ಪಟ್ಟಣದಲ್ಲಿ ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ. ಮೊದಲೇ ಕ್ರಮ ಕೈಗೊಂಡಿದ್ದರೆ ಈ ರೀತಿಯ ಘಟನೆ ಆಗುತ್ತಿತ್ತಾ? ಸರ್ವ ಜನಾಂಗದ ಶಾಂತಿಯ ತೋಟದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದವರು ಯಾರು? ನಾನು ಯಾವುದೇ ಒಂದು ಸಮುದಾಯ ಓಲೈಸುವ ಕೆಲಸ ಮಾಡುತ್ತಿಲ್ಲ. ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್​ ಎಸೆಯುವ ಕೆಲಸ ಆಗಿದೆ. ತಲ್ವಾರ್​ ಹಿಡಿದು ಓಡಾಡ್ತಿದ್ದಾರೆ. ಇದರಲ್ಲೇ ಗೊತ್ತಾಗುತ್ತದೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂಬುದಾಗಿ. ನಿಮ್ಮ ಆಡಳಿತ ವೈಫಲ್ಯ ಇಟ್ಟುಕೊಂಡು ನನಗೆ ಬುದ್ಧಿ ಹೇಳಬೇಡಿʼ ಎಂದು ತಿರುಗೇಟು ನೀಡಿದ್ದಾರೆ.
ನಾಳೆ ನಾಗಮಂಗಲಕ್ಕೆ ಕುಮಾರಸ್ವಾಮಿ ಭೇಟಿ: 
ನಾನು ಸಿಎಂ ಆಗಿದ್ದಾಗ ಕೋಮು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿಲ್ಲ. ಈ ಹಿಂದೆ ನಾನು ಹೇಗೆ ಆಡಳಿತ ನಡೆಸಿದ್ದೇನೆಂಬುದು ಕಡತದಲ್ಲೇ ಇದೆ. ಪ್ರಮುಖ ಆರೋಪಿ ಈಗಾಗಲೇ ಪರಾರಿಯಾಗಿರುತ್ತಾನೆ. ಜೀವನಕ್ಕೆ ಆಧಾರವಾಗಿದ್ದವರನ್ನು ಬಂಧಿಸಿ ಜೈಲಿನಲ್ಲಿ ಇಟ್ಟಿದ್ದಾರೆ. ನಾಳೆ ನಾಗಮಂಗಲಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುತ್ತೇನೆ. ಸ್ಥಳಕ್ಕೆ ಭೇಟಿ ನೀಡಿ ಜನರಿಂದಲೇ ಮಾಹಿತಿ ಪಡೆಯುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.