Advertisement
ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಾತನಾಡಿ, ಗಣಪತಿ ವಿಸರ್ಜನೆ ವೇಳೆ ನಡೆದ ಘಟನೆ ಹಿಂದೂಗಳ ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸಿದೆ. ನಾಗಮಂಗಲದ ಘಟನೆಯ ಹಿಂದೆ ನಿಷೇಧಿತ ಪಿಎಫ್‌ಐ ಸಂಘಟನೆಯ ಕೈವಾಡವಿರುವ ಶಂಕೆಯಿದೆ. ಆದ್ದರಿಂದ ಘಟನೆ ಬಗ್ಗೆ ಸರಿಯಾದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
Related Articles
ಮಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ಮೇಲೆ ಅನ್ಯಮತೀಯ ಮತಾಂಧ ಶಕ್ತಿಗಳು ಕಲ್ಲು ತೂರಾಟ ಮಾಡುವುದರ ಮೂಲಕ ದುಷ್ಕೃತ್ಯ ಮೆರೆದಿದ್ದಾರೆ. ಇಂತಹ ಪ್ರಕರಣಗಳು ಪದೇಪದೇ ಮರುಕಳಿಸಲು ಕಾಂಗ್ರೆಸ್ ಸರಕಾರ ಕ್ರಿಮಿನಲ್‌ಗಳ ಬಗ್ಗೆ ತೋರುತ್ತಿರುವ ಮೃದು ಧೋರಣೆಯೇ ಪ್ರಮುಖ ಕಾರಣ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
Advertisement
ಘಟನೆಯನ್ನು ಖಂಡಿಸಿರುವ ಅವರು, ಕಟ್ಟಡಗಳ ಒಳಗಿನಿಂದ ಹಿಂದೂಗಳನ್ನು ಗುರಿಯಾಗಿಸಿ ಕಲ್ಲು ತೂರಿರುವುದು ಪೂರ್ವಯೋಜಿತ ಕೃತ್ಯ ಎಂದು ಸಾಬೀತಾಗಿದೆ. ಕಾಂಗ್ರೆಸ್ ಸರಕಾರ ಬಂದ ಕರ್ಮಕ್ಕೆ ಹಿಂದೂಗಳು ಯಾತನೆ ಅನುಭವಿಸುತ್ತಿದ್ದಾರೆ ಎಂದಿದ್ದಾರೆ. ಪೊಲೀಸರು ಗಲಭೆ ನಡೆಸಿದ ಕಿಡಿಗೇಡಿಗಳನ್ನು ಬಂಧಿಸುವ ಬದಲು ಸ್ಥಳೀಯ ಹಿಂದೂಗಳ ಮನೆಗಳಿಗೆ ನುಗ್ಗಿ ಅಮಾಯಕ ಯುವಕರನ್ನು ಠಾಣೆಗೆ ಕರೆದೊಯ್ಯುವ ಮೂಲಕ ಗಾಯದ ಮೇಲೆ ಬರೆ ಎಳೆದಂತೆ ಕಾಂಗ್ರೆಸ್ ಸರಕಾರ ನಡೆದುಕೊಳ್ಳುತ್ತಿದೆ. ತಪ್ಪಿತಸ್ಥರಿಗೆ ಕಠಿನ ಶಿಕ್ಷೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಡಿಕೇರಿಯಲ್ಲೂ ಪ್ರತಿಭಟನೆಮಡಿಕೇರಿ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿ ನಲ್ಲಿ ಗಣೇಶ ಮೂರ್ತಿಯ ಮೆರವಣಿಗೆ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಹಿಂದೂ ಸಂಘಟನೆಗಳು ಮಡಿಕೇರಿ ಯಲ್ಲಿ ಪ್ರತಿಭಟನೆ ನಡೆಸಿದವು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಗಲಭೆ ನಡೆಸಿ ಮೆರವಣಿಗೆಗೆ ತಡೆಯೊಡ್ಡಿದ ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಹಿಂದೂ ಸಂಘಟನೆಗಳ ಪ್ರಮುಖರು, ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.