Advertisement

ಶ್ರೀಕ್ಷೇತ್ರ ಘನ್ಸೋಲಿ ಮೂಕಾಂಬಿಕಾ ಮಂದಿರ: ನಾಗರ ಪಂಚಮಿ

01:35 PM Aug 21, 2021 | Team Udayavani |

ನವಿಮುಂಬಯಿ: ಶ್ರೀಕ್ಷೇತ್ರ ಘನ್ಸೋಲಿ ಮೂಕಾಂಬಿಕಾ ಮಂದಿರದಲ್ಲಿ ನಾಗರ ಪಂಚಮಿ ಉತ್ಸವವನ್ನು ಸರಳ ರೀತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗ ಳೊಂದಿಗೆ ಆಚರಿಸಲಾಯಿತು.

Advertisement

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ನಾಗದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಸಿಯಾಳ ಅಭಿಷೇಕ, ನಾಗ ತನು, ನಾಗ ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಜರಗಿತು. ಕೊರೊನಾ ಮಹಾಮಾರಿಯಿಂದಾಗಿ ಮಹಾರಾಷ್ಟ್ರ ಸರಕಾರದ ಮಾರ್ಗಸೂಚಿಯಂತೆ ದೇವಸ್ಥಾನ ಭಕ್ತರಿಗೆ ಮುಚ್ಚಲ್ಪಟ್ಟಿದ್ದರೂ ನಿತ್ಯಪೂಜೆ ನಿರಂತರವಾಗಿ ನಡೆಯುತ್ತಿದೆ. ಭಕ್ತರಿಗೆ ಸೇವೆ ನೀಡುವ ಅವಕಾಶ ಇಲ್ಲದಿದ್ದರೂ ನಾಗರ ಪಂಚಮಿ ಸಂದರ್ಭದಲ್ಲಿ ಉಪಸ್ಥಿತರಿದ್ದ ಭಕ್ತರಿಗೆ ನಾಗದೇವರ ಗಂಧ ಪ್ರಸಾದ ವಿತರಿಸಲಾಯಿತು.

ಇದನ್ನೂ ಓದಿ:ಇಡಿ ನೋಟಿಸ್ ಹಿನ್ನೆಲೆ ದೆಹಲಿಗೆ ತೆರಳಿದ ಜಮೀರ್ ಅಹಮದ್ ಖಾನ್

ದೇವಾಲಯದ ಪ್ರಧಾನ ಅರ್ಚಕ ಗುರುಪ್ರಸಾದ್‌ ಭಟ್‌ ಪೂಜೆಯ ವಿಧಿ- ವಿಧಾನಗಳನ್ನು ನೆರವೇರಿಸಿದರು. ಸಹ ಅರ್ಚಕ ರಾದ ನಾಗರಾಜ್‌ ಭಟ್‌, ಸುರೇಶ್‌ ಭಟ್‌, ಕೃಷ್ಣ ಭಟ್‌ ಮೊದಲಾದವರು ಸಹಕರಿಸಿದರು. ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳ ತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ನಂದಿಕೂರು ಜಗದೀಶ್‌ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್‌ ಎಸ್‌. ಕೋಟ್ಯಾನ್‌, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ್‌ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್‌ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೆಬಲ್‌ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯೆಯರು ಹಾಗೂ ಭಕ್ತರು ನಾಗದೇವರ ತೀರ್ಥ ಪ್ರಸಾದ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next