Advertisement

ಡಬ್ಬಿಂಗ್‌ ವಿರೋಧಿ ಕಾನೂನಿಗೆ ವಾಟಾಳ್‌ ನಾಗರಾಜ್‌ ಆಗ್ರಹ

03:45 AM Apr 06, 2017 | Team Udayavani |

ಬೆಂಗಳೂರು: ಹಾಲಿವುಡ್‌ ಸಿನಿಮಾ ಸ್ಪೈಡರ್‌ ಮ್ಯಾನ್‌ ಡಬ್ಬಿಂಗ್‌ ಮಾಡುತ್ತಿರುವುದನ್ನು ವಿರೋಧಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ವಿಧಾನ ಸೌಧದ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

Advertisement

ವಿಧಾನಸೌಧ ಹಾಗೂ ವಿಕಾಸ ಸೌಧದ ಮಧ್ಯದಲ್ಲಿರುವ ಗಾಂಧಿ ಪ್ರತಿಮೆ ಎದುರು ಪತ್ರಿಭಟನೆ ನಡೆಸಲು ಮುಂದಾದ ಅವರನ್ನು ವಿಧಾನ ಸೌಧದ ಪಶ್ಚಿಮ ದ್ವಾರದಲ್ಲಿಯೇ ಪೊಲಿಸರು ತಡೆದು ವಶಕ್ಕೆ ಪಡೆದರು.

ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,  ಹಾಲಿವುಡ್‌ ಚಿತ್ರವನ್ನು ಕನ್ನಡದಲ್ಲಿ ಡಬ್ಬಿಂಗ್‌ ಮಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಚಿತ್ರ ಬಿಡುಗಡೆಯಾದರೆ, ಕನ್ನಡ ಭಾಷೆ ಹಾಗೂ ಸಂಸ್ಕೃತಿಗೆ ಧಕ್ಕೆಯಾಗುತ್ತದೆ. ರಾಜ್ಯ ಸರ್ಕಾರ ಡಬ್ಬಿಂಗ್‌ ವಿರೋಧಿ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ವಿರೋಧ
ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ್‌ ಮಾಧ್ಯಮಗಳ ನಿಯಂತ್ರಣಕ್ಕೆ ಜಂಟಿ ಸದನ ಸಮಿತಿ ರಚಿಸಿರುವುದನ್ನು ವಾಪಸ್‌ ಪಡೆಯಬೇಕು. ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯವಾಗುತ್ತದೆ. ಈಗಾಗಲೇ ಸಮಿತಿ ಅಧ್ಯಕ್ಷರಾಗಲು ಆರೋಗ್ಯ ಸಚಿವ ರಮೇಶ್‌ ಕುಮಾರ್‌ ನಿರಾಕರಿಸಿದ್ದಾರೆ. ಅಲ್ಲದೇ. ಅನೇಕ ಶಾಸಕರು ಸಮಿತಿ ಸದಸ್ಯರಾಗಲು ಹಿಂದೇಟು ಹಾಕಿದ್ದಾರೆ. ಹೀಗಾಗಿಪ್ರತಿಷ್ಠೆಗಾಗಿ ಸಮಿತಿ ಸಭೆ ನಡೆಸುವ ಬದಲು ಸಮಿತಿಯನ್ನು ರದ್ದು ಪಡೆಸಬೇಕು ಎಂದು ವಾಟಾಳ್‌ ನಾಗರಾಜ್‌ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next